ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಕಾರು ಅಪಘಾತ;ಕುಟುಂಬಸ್ಥರಿಗೆ ಗಾಯ,ಆಸ್ಪತ್ರೆಗೆ ದಾಖಲು.


ಧಾರವಾಡ: ದಾವಣಗೆರೆ ಜಿಲ್ಲಾ ಪಂಚಾಯ್ತಿ (ZP) ಸಿಇಒ ಸ್ಥಾನದಿಂದ ವಿಜಯಪುರ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ವಿಜಯಪುರ ನೂತನ ಡಿಸಿಗೆ ಗಾಯಗಳಾಗಿರುವ ಘಟನೆ ಧಾರವಾಡ ಬಳಿಯ ಬೈಪಾಸ್‌ನಲ್ಲಿ ಸಂಭವಿಸಿದೆ.

ವಿಜಯಪುರ ನೂತನ ಡಿಸಿ ವಿಜಯ ಮಹಾಂತೇಶ ದಾನಮ್ಮನವರ, ಪತ್ನಿ, ಮಕ್ಕಳಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ವಿಜಯ ಮಹಾಂತೇಶ ದಾನಮ್ಮನವರಿಗೆ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದಾವಣಗೆರೆಯಿಂದ  ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Post a Comment

0 Comments