ಹರಿಹರ :ಅನಾರೋಗ್ಯದ ಕಾರಣ ನಿನ್ನೆ ಬೆಳಗ್ಗಿನ ಜಾವ ಮಣಿಪಾಲ್ ಆಸ್ಪತ್ರೆಯಲ್ಲಿ ಹರಿಹರದ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಉಜ್ಜೆಶ್ .ಡಿ ದೈವಧೀನರಾಗಿದ್ದು ಇಂದು ನಗರದ ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಮತ್ತು ಜೆಡಿಎಸ್ ನ ಸರ್ವ ಸದಸ್ಯರು ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದರು.
ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಎಚ್. ಎಸ್ ಶಿವಶಂಕರ್ ದಿ।ಉಜ್ಜೆಶ್ ಡಿ ಅಜಾತಶತ್ರುವಾಗಿದ್ದು ನಗರದ ಅಭಿವೃದ್ಧಿಯ ಬಗ್ಗೆ ಹೆಚ್ಚು ಚಿಂತಿಸುತ್ತಿದ್ದರು.ಇಂದು ಅವರು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ.ಭಗವಂತ ಅವರನ್ನು ಇಷ್ಟು ಬೇಗ ಕರೆಸಿಕೊಳ್ಳಬಾರದಿತ್ತು.ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವಿನ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು.
ಸಂತಾಪ ಸೂಚನಾ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಚಿದಾನಂದಪ್ಪ ನಗರಸಭಾ ಉಪಾಧ್ಯಕ್ಷರಾದ ವಾಮನಮೂರ್ತಿ,ತಾಲ್ಲೂಕು ಅಧ್ಯಕ್ಷ ಪರಮೇಶ್ವರ ಗೌಡ್ರು,ಸೇರಿದಂತೆ ನಗರಸಭೆಯ ಜೆಡಿಎಸ್ ನ ಸರ್ವ ಸದಸ್ಯರು,ಮಹಿಳಾ ಘಟಕದ ಎಲ್ಲ ಪದಾಧಿಕಾರಿಗಳು,ಜೆಡಿಎಸ್ ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು,ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಮೃತರ ಆತ್ಮಕ್ಕೆ ಶಾಂತಿ ಕೋರಿದರು.
0 Comments