ಸಾಗರ:ಶರಾವತಿ ಹಿನ್ನೀರು ಪ್ರದೇಶದ ಜನರ ಬಹುದಿನದ ಕನಸಾದ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರು ಮತ್ತು ಆಳುವಂಥ ಸರ್ಕಾರ ತಬ್ಬಿ ದುರುದ್ದೇಶಪೂರಕವಾಗಿ ವಿಳಂಬ ಮತ್ತು ನಿರ್ಲಕ್ಷ ತೋರುತ್ತಿರುವ ಕಾರಣದಿಂದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಸಾಗರದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ.
ಎಂದು ತಾಲ್ಲೂಕಿನ ಲಾವಿಗೆರೆ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಕಾಗೋಡು ತಿಮ್ಮಪ್ಪನವರು ಆಸಕ್ತಿವಹಿಸಿ ಹಸಿರುಮಕ್ಕಿ ಒಳಗೆ 98ಕೋಟಿ ರೂ ವೆಚ್ಚದಲ್ಲಿ ಸೇತುವೆ ಮಂಜೂರು ಮಾಡಿ ಕಾಮಗಾರಿ ಯನ್ನು ಆರಂಭಿಸಿದ್ದರು.
ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರ ಸೇತುವೆ ಮಂಜೂರು ಮಾಡಿದೆ ಎಂಬ ಕಾರಣವನ್ನೇ ಮುಂದಿಟ್ಟುಕೊಂಡು,ಕಾಮಗಾರಿಗೆ ಸರಿಯಾಗಿ ಹಣವನ್ನ ಬಿಡುಗಡೆ ಮಾಡದೆ ಕೆಲಸ ನೆನೆಗುದಿಗೆ ಬೀಳಲು ಕಾರಣವಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಅವರು ಆರೋಪಿಸಿದರು .
ಎತ್ತಿವೆ ವಿಳಂಬ ಕಾಮಗಾರಿಯನ್ನು ಖಂಡಿಸಿ ಶೀಘ್ರವಾಗಿ ಪಕ್ಷಾತೀತವಾಗಿ ನಗರದ ಕೆಪಿ ಸರ್ಕಲ್ಲಿನಿಂದ ಹಸಿರುಮಕ್ಕಿ ವರೆಗೆ ಪಾದಯಾತ್ರೆ ನಡೆಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ತಾಲ್ಲೂಕಿನಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು ಭ್ರಷ್ಟಾಚಾರ ತಾಂಡವಾಡುತ್ತಿದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟು ಹೋಗಿದ್ದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಭಾಗವಹಿಸಿದ ಶಾಸಕರ ಆಪ್ತರ ಮೇಲೆ ಎಫ್ ಐಆರ್ ದಾಖಲಿಸದೆ ವಿಳಂಬ ತಂತ್ರ ಅನುಸರಿಸುತ್ತಿದ್ದಾರೆ.ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಅವರು ಖಾರವಾಗಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ.ನಾನು ಯಾವುದೇ ಕಾರಣಕ್ಕೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂಬ ಹೇಳಿಕೆಯನ್ನ ಈ ಸಂದರ್ಭದಲ್ಲಿ ನೀಡಿದರು .
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಸೋಮಶೇಖರ ಲ್ಯಾವಿಗೆರೆ ನಗರಸಭೆ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ ಉಪಸ್ಥಿತರಿದ್ದರು .
0 Comments