ದಾವಣಗೆರೆ:-ಭಾರತೀಯ ಜನತಾ ಪಕ್ಷ ಛಲವಾದಿ ನಾರಾಯಣಸ್ವಾಮಿ ಅವರ ನಿಷ್ಠೆ ಹಾಗೂ ಸಂಘಟನಾ ಚತುರತೆ ಮತ್ತು ಕಾರ್ಯಕ್ಷಮತೆಯನ್ನು ಪರಿಗಣಿಸಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಟಿಕೆಟ್ ನೀಡುವ ಮೂಲಕ ಪಕ್ಷ ಅವರನ್ನು ಗುರುತಿಸಿತ್ತು.ಇದೀಗ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷ ರಾಘವೇಂದ್ರ ಕೊಂಡಜ್ಜಿ ಅವರು ಬಿಜೆಪಿ ಪಕ್ಷದ ಕೇಂದ್ರ ಹಾಗೂ ರಾಜ್ಯದ ವರಿಷ್ಠರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.
ರಾಘವೇಂದ್ರ ಕೊಂಡಜ್ಜಿ ಅವರು ಬೆಂಗಳೂರಿನಲ್ಲಿ ಇಂದು ಮಲ್ಲೇಶ್ವರಂನಲ್ಲಿರುವ ಛಲವಾದಿ ನಾರಾಯಣಸ್ವಾಮಿ ಅವರ ಕಚೇರಿಗೆ ತೆರಳಿ ಶ್ರೀಯುತರಿಗೆ ಹೂಗುಚ್ಚ ನೀಡುವ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.
0 Comments