ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗೆ ಮುಹೂರ್ತ !?


ಬೆಂಗಳೂರು:-ರಾಜ್ಯ ಚುನಾವಣಾ ಆಯೋಗ ಶೀಘ್ರದಲ್ಲಿ ಜಿಲ್ಲಾ ಪಂಚಾಯತ್ ಪಂಚಾಯತ್ ನಡೆಸುವ ಸಂಭವವಿದ್ದು ಈಗಾಗಲೇ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿದೆ.ಈ ಮೊದಲಿಗೆ ನಿಗದಿ ಮಾಡಲಾಗಿದ್ದ ಕ್ಷೇತ್ರ ವಿಂಗಡಣೆ ಹಾಗೂ ಮೀಸಲಾತಿ ರದ್ದುಪಡಿಸಿ ಹೊಸದಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ಷೇತ್ರಗಳ ವಿಂಗಡನೆ ಸೀಮೆಗಳನ್ನು ನಿಗದಿಪಡಿಸಲು ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವೇ ಇನ್ನು ತಾಲ್ಲೂಕು ಜಿಲ್ಲಾ ಪಂಚಾಯಿತಿಗಳ ಕ್ಷೇತ್ರದ ಸೀಮೆ ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ.

ಈ ಮೊದಲು ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ವಿಂಗಡನೆಯ ವ್ಯಾಪ್ತಿ ಮೀಸಲಾತಿ ನಿಗದಿ ಮಾಡುವಂತಹ ಕೆಲಸಗಳನ್ನು ಚುನಾವಣಾ ಆಯೋಗ ಮಾಡುತ್ತಿತ್ತು ಈಗ ಆ ಎಲ್ಲಾ ಕೆಲಸಗಳನ್ನು ಸೀಮಾ ಆಯೋಗವೇ ಮಾಡಲಿದೆ.

ಸೀಮಾ ಆಯೋಗದ ವರದಿಯ ನಂತರ ಚುನಾವಣೆ ಆಯೋಗ ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ನಡೆಸುವ ಸಾಧ್ಯತೆ ಇದ್ದು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣೆ ಎದುರಿಸಲು ತಯಾರಾಗಬೇಕಾಗಿದೆ.ಯಾವ ಸಂದರ್ಭದಲ್ಲಾದರೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.

ಸೀಮಾ ಆಯೋಗದ ಮಾರ್ಗದರ್ಶಿ ಹಾಗೂ ಸೂಚನೆಗಳು ಕೆಳಕಂಡಂತಿವೆ.
ಪ್ರಕಾಶ್ ಮಂದಾರ 
8880499904

Post a Comment

0 Comments