ಅಂತಾರಾಷ್ಟ್ರೀಯ ಯೋಗ ದಿನಾಚರಣೆ;ಪೂರ್ವಭಾವಿ ಯೋಗ ತರಬೇತಿಯಲ್ಲಿ ಹರಿಹರದ ಶಾಸಕ ಎಸ್ ರಾಮಪ್ಪ.!!


ಜಿಲ್ಲಾಡಳಿತ ಮತ್ತು ಜಿಲ್ಲಾ ಆಯುಷ್ ಇಲಾಖೆ ಜತೆಗೂಡಿ ದೊಡ್ಡಬಾತಿಯ ತಪೋವನದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಯುರ್ವೇದಿಕ್ ಆಸ್ಪತ್ರೆಯ ಸಹಯೋಗದೊಂದಿಗೆ ದಿನಾಂಕ 21ರಂದು ಬೆಳಿಗ್ಗೆ 5.30ಕ್ಕೆ ಹರಿಹರದ ಪಾರಂಪಾರಿಕ ಸ್ಥಳವಾದ ಹರಿಹರೇಶ್ವರ ದೇವಸ್ಥಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಮತ್ತು ತಾಲ್ಲೂಕು ಆಡಳಿತದೊಂದಿಗೆ ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹಕಾರದೊಂದಿಗೆ ಯೋಗ ದಿನಾಚರಣೆ ನಡೆಯಲಿದೆ.
 
ಇಂದು ಹರಿಹರದ ಶಾಸಕ ಎಸ್ ರಾಮಪ್ಪ ನವರು ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಹರಿಹರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಯೋಗ ತರಬೇತಿಗೆ ಆಗಮಿಸಿ ಯೋಗಾಭ್ಯಾಸ ಮಾಡುವ ಮೂಲಕ ಪೂರ್ವಭಾವಿ ಯೋಗ ತರಬೇತಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಯೋಗಪಟುಗಳು, ಯೋಗ ಅಭಿಮಾನಿಗಳು ಸೇರಿದಂತೆ ನೂರಾರು ಸಂಖ್ಯೆಯ ನಾಗರಿಕರು ಪಾಲ್ಗೊಂಡರು .

Post a Comment

0 Comments