ಹರಿಹರ:ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆ ರಾಜ್ಯದಲ್ಲಿ ಅನೇಕ ಅವಾಂತರವನ್ನೇ ಸೃಷ್ಟಿಸಿದೆ.ಸುರಿಯುತ್ತಿರುವ ಭಾರೀ ಮಳೆಯಿಂದ ನದಿ ,ಹಳ್ಳ -ಕೊಳ್ಳಗಳು, ಜಲಾಶಯಗಳು ಅಪಾಯದ ಅಂಚಿನಲ್ಲಿ ತುಂಬಿ ಹರಿಯುತ್ತಿವೆ.
ನಿನ್ನೆ ಸುರಿದ ಭಾರೀ ಮಳೆಗೆ ಹರಿಹರ ತಾಲ್ಲೂಕು ನಂದಿಗಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಚಂದ್ರಪ್ಪ ಅವರ ಮನೆ ಕುಸಿದು ಬಿದ್ದಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮನೆ ಸಂಪೂರ್ಣವಾಗಿ ಕುಸಿದು ಬಿದ್ದ ಪರಿಣಾಮ ಕುಟುಂಬದವರು ಮಳೆಯಲ್ಲೇ ರಾತ್ರಿಯಿಡೀ ಕಾಲ ಕಳೆಯುವಂತಾಗಿದೆ.
ತಾಲ್ಲೂಕು ದಂಡಾಧಿಕಾರಿಗಳು ಸೇರಿದಂತೆ ಗ್ರಾಮ ಲೆಕ್ಕಾಧಿಕಾರಿಗಳು ಕುಸಿದು ಬಿದ್ದಿರುವ ಮನೆಯನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸುವತ್ತ ಮುಂದಾಗಬೇಕಾಗಿದೆ.
ಪ್ರಕಾಶ್ ಮಂದಾರ
0 Comments