ನಾಳೆ ರಾಜನಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ..!


ಹರಿಹರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ಹರಿಹರ.ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ,ರಾಜನಹಳ್ಳಿ.ಹಾಗೂ ಪ್ರಗತಿಬಂಧು -ಸ್ವಸಹಾಯ ಸಂಘಗಳ ಒಕ್ಕೂಟ ಹನಗವಾಡಿ ವಲಯ ಇವರ ಸಂಯುಕ್ತಾಶ್ರಯದಲ್ಲಿ ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ॥ ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃ ಶ್ರೀ ಡಾ॥ ಹೇಮಾವತಿ ವಿ.ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 7.30 ಕ್ಕೆ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಮಧ್ಯಾಹ್ನ 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಗುರುಪೀಠದ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಕುಳಿತುಕೊಳ್ಳುವ ಭಕ್ತಾದಿಗಳು ಯಾವುದೇ ರೀತಿಯ ಶುಲ್ಕವನ್ನು ಭರಿಸುವಂತಿಲ್ಲ.ಪೂಜೆಗೆ ಬೇಕಾದ ಸಾಮಗ್ರಿಗಳನ್ನು ಮಾತ್ರ ಆ ಕುಟುಂಬದವರು ತೆಗೆದುಕೊಂಡು ಬರತಕ್ಕದ್ದು.ಅದೇ ರೀತಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಭಕ್ತಾಧಿಗಳು ತನು-ಮನ -ಧನ ಸಹಾಯದೊಂದಿಗೆ ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಗಣಪತಿ ಮಾಳಂಜಿ ಅವರು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪೂಜಾ ಕಾರ್ಯಕ್ರಮ ಬೆಳಗ್ಗೆ 7.30 ಕ್ಕೆ ಪ್ರಾರಂಭ.
 ಧಾರ್ಮಿಕ ಸಭಾ ಕಾರ್ಯಕ್ರಮ ಬೆಳಿಗ್ಗೆ 11.00 ಗಂಟೆಗೆ.

ಸ್ಥಳ .ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ರಾಜನಹಳ್ಳಿ.

ಹರಿಹರದಿಂದ ರಾಜನಳ್ಳಿ ವಾಲ್ಮೀಕಿ ಸಮುದಾಯ ಭವನಕ್ಕೆ ನೇರ ಬಸ್ ಹಾಗೂ ಆಟೊ ಸಂಪರ್ಕವಿದೆ.

ಪೂಜೆಗೆ ಕುಳಿತುಕೊಳ್ಳುವ ಭಕ್ತಾದಿಗಳಿಗೆ ಯಾವುದೇ ರೀತಿಯ ಶುಲ್ಕವಿಲ್ಲ.

Post a Comment

0 Comments