ರೈತರ ಸಮಸ್ಯೆಗಳಿಗೆ ಮೊಳಗಿದ ಸಂಘದ ಧ್ವನಿ .!


ಸಾಗರ:ತಾಲ್ಲೂಕಿನ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಸಾಗರ ತಾಲ್ಲೂಕು ರೈತ ಸಂಘದಿಂದ ಧ್ವನಿ ಮೊಳಗಿತು .
ರೈತ ಸಂಘದ ನಿಯೋಗದೊಂದಿಗೆ ಸಾಗರದ ಉಪ ಅರಣ್ಯಾಧಿಕಾರಿಗಳನ್ನು ಭೇಟಿ ಮಾಡಿ ಅವರೊಂದಿಗೆ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಸುದೀರ್ಘವಾದ ಚರ್ಚೆ ನಡೆಸಿದರು .

ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ರೈತ ಸಂಘದ ನಿಯೋಗದೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಅವರ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂಬ ಭರವಸೆಯನ್ನು ನೀಡಿದರು .

ಸಾಗರ ತಾಲ್ಲೂಕು ರೈತ ಸಂಘದ ಅಧ್ಯಕ್ಷರು ಸೇರಿದಂತೆ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ತಾಲ್ಲೂಕಿನ ವಿವಿಧ ಗ್ರಾಮದ ರೈತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments