ದಾವಣಗೆರೆ:ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ. ನರ್ಸಿಂಗ್ ಕಾಲೇಜ್. ದೊಡ್ಡಬಾತಿಯಲ್ಲಿ "ಆಜಾದಿ ಕಾ ಅಮೃತ್ ಮಹೇೂತ್ಸವ" 76 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಧ್ವಜಾರೋಹಣವನ್ನು ತಪೋವನದ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ಶಶಿಕುಮಾರ್ ಮೇರವಾಡೆ ಅವರು ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ಮಾಡಿದ್ದ ಮಹನೀಯರುಗಳ ಆದರ್ಶಗಳನ್ನು ನಾವೆಲ್ಲ ಮೈಗೂಡಿಸಿಕೊಂಡಾಗ ಮಾತ್ರ ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ್ಯ ದಿನಾಚರಣೆಗೆ ಒಂದು ಅರ್ಥ ಬರುತ್ತದೆ.ಇದರ ಜೊತೆಗೆ ಮಹನೀಯರಿಗೆ ಗೌರವ ಸಲ್ಲಿಸಿದಂತಾಗುತ್ತದೆ.ಎಂದು ನಾವು ಎಪ್ಪತ್ತೈದನೇ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ.ಈ ಸಂಭ್ರಮಕ್ಕೆ ಕಾರಣ ಸ್ವಾತಂತ್ರಕ್ಕಾಗಿ ಬ್ರಿಟಿಷರೊಂದಿಗೆ ಕೆಚ್ಚೆದೆಯ ಹೋರಾಟ ನಡೆಸಿ ತಮ್ಮ ಪ್ರಾಣವನ್ನೇ ತ್ಯಾಗ ತ್ಯಾಗ ಮಾಡಿ ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ.ಅವರ ಹೋರಾಟದ ಫಲವೇ ಇಂದು ನಾವು ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಲು ಕಾರಣವಾಗಿದೆ ಎಂದರು.
ಸ್ವಾತಂತ್ರ ಸೇನಾನಿಗಳ ಹೋರಾಟದಂತೆ ನಾವೆಲ್ಲರೂ ಸಹ ಹೋರಾಟದ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕಾಗಿದೆ.ಹೋರಾಟದ ಜೊತೆ ಜೊತೆಗೆ ಸಾಮಾಜಿಕ ಕಳಕಳಿಯು ಕೂಡ ಅಷ್ಟೇ ಅವಶ್ಯಕವಾಗಿದೆ.ದೇಶ ಎಪ್ಪತ್ತೈದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ.ಇಂದು ಭಾರತ ವಿಶ್ವ ಗುರುವಾಗಿದೆ. ಇಡೀ ಜಗತ್ತು ಭಾರತದತ್ತ ನೋಡುವಂತೆ ಅತ್ಯುನ್ನತ ಸಾಧನೆಯನ್ನು ಭಾರತ ಮಾಡಿದೆ.ಸದೃಢವಾದ ದೇಶವನ್ನು ಕಟ್ಟಲು ಪ್ರತಿಯೊಬ್ಬರು ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕು.ಹಾಗಾದಾಗ ಮಾತ್ರ ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಒಂದು ಅರ್ಥ ಬರಲಿದೆ.ಯುವಕರು ಮತ್ತು ರೈತರು ಈ ದೇಶದ ಬೆನ್ನೆಲುಬು ಅವರಿಂದ ಮಾತ್ರ ಭಾರತ ವಿಶ್ವ ಭೂಪಟದಲ್ಲಿ ಪ್ರಕಾಶಮಾನವಾಗಿ ಬೆಳಗಲು ಸಾಧ್ಯವಾಗುತ್ತದೆ.ನಮ್ಮಲ್ಲಿರುವ ಅನೇಕ ಯುವ ಪ್ರತಿಭಾವಂತರು ವಿಶ್ವ ಮಟ್ಟದಲ್ಲಿ ತಮ್ಮ ಪ್ರತಿಭೆ ಗಳಿಂದ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ .ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ .ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ .ಇನ್ನು ಕೆಲವೇ ದಿನದಲ್ಲಿ ಭಾರತ ವಿಶ್ವದ ನಾಯಕ ಸ್ಥಾನವನ್ನು ಅಲಂಕರಿಸಲಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ॥ಶ್ರೀಕಾಂತ್ ಬಿ.ಜಿ ಇವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಡಾ॥ ಎಸ್.ಎಂ ರಾಜು ನಿವೃತ್ತ ಐಎಎಸ್ ಅಧಿಕಾರಿಗಳು,ಸಂಶೋಧಕರು ಮೀರಾಕಲ್ ಡ್ರಿಂಕ್ಸ್.
ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಆರೋಗ್ಯ ಶಿಕ್ಷಣ ಶಿಬಿರ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ.ಡಾ॥ಎಸ್ .ಎಂ ರಾಜು ಇವರು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನವನ್ನು ವಿತರಣೆ ಮಾಡಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಆಡಳಿತ ಮಂಡಳಿ, ಪ್ರಾಚಾರ್ಯರು, ಹಾಗೂ ಸರ್ವ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
0 Comments