ಮೌಲಾನಾ ಆಜಾದ್ ಶಾಲಾ ವಿದ್ಯಾರ್ಥಿಗಳಿಗೂ ಅಗತ್ಯ ಮೂಲಭೂತ ಸೌಕರ್ಯದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಅಲ್ಲವೇ.!?


ಹರಿಹರ:ದೇಶದ ಪ್ರಗತಿ  ಶಿಕ್ಷಣದ ಮೇಲೆ ಅವಲಂಬಿತವಾಗಿದೆ.ಉತ್ತಮ ಗುಣಮಟ್ಟದ ಶಿಕ್ಷಣ ಪಡೆದ ವಿದ್ಯಾರ್ಥಿ ಭವ್ಯ ಭಾರತದ ಭವಿಷ್ಯದ ನಾಗರಿಕನಾಗಿ ದೇಶದ ಪ್ರಗತಿಯಲ್ಲಿ ತನ್ನದೇ ಆದ ಪಾತ್ರವನ್ನು ನಿರ್ವಹಿಸುತ್ತಾನೆ.

ಗುಣಮಟ್ಟದ ಶಿಕ್ಷಣ ನೀಡುವ ಸಂದರ್ಭದಲ್ಲಿ ಯಾವುದೇ ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ರೀತಿಯ ಶಿಕ್ಷಣವನ್ನು ನೀಡಬೇಕು.ಉತ್ತಮ ಪರಿಸರದಲ್ಲಿ,ಸುಸಜ್ಜಿತವಾದ ಕಟ್ಟಡದಲ್ಲಿ,ನುರಿತ ಶಿಕ್ಷಕರ ವೃಂದದಿಂದ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಿದಾಗ ಮಾತ್ರ ವಿದ್ಯಾರ್ಥಿಗಳು ಭವ್ಯ ಭಾರತದ ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ.ಆದರೆ ಶಿಕ್ಷಣ ನೀಡುವ ಸಂದರ್ಭದಲ್ಲಿ ಯಾವುದೇ ತಾರತಮ್ಯ ಮಾಡಬಾರದು ಅಲ್ಲವೇ ?

ಹರಿಹರದ ಮೌಲಾನ್ ಆಜಾದ್ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಪರಿಸರದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ.?ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಕಟ್ಟಡವೇ ಇಲ್ಲ .ಸರಿಸುಮಾರು ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮೌಲಾನಾ ಆಜಾದ್ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಇಲ್ಲಿರುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯವಿಲ್ಲ,ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆಯಿಲ್ಲದೆ ತೀವ್ರ ಮುಜುಗರಕ್ಕೆ ಒಳಪಡುವಂಥ ಪರಿಸ್ಥಿತಿ ಈ ಶಾಲೆಯಲ್ಲಿ ಬಂದೊದಗಿದೆ.
ಈ ಬಾರಿ ರಾಜ್ಯದಲ್ಲಿ ವಿಪರೀತವಾಗಿ ಮಳೆ ಸುರಿಯುತ್ತಿದೆ.ಹರಿಹರ ಇದರಿಂದ ಹೊರತಾಗಿಲ್ಲ,ವಿಪರೀತ ಮಳೆಯ ಪರಿಣಾಮ ಮೌಲಾನ್ ಆಜಾದ್ ಆಂಗ್ಲ ಮಾಧ್ಯಮ ಶಾಲೆಗೆ ಮಳೆಯ ನೀರು ನುಗ್ಗಿದೆ.ಇಲ್ಲಿ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸುಸಜ್ಜಿತವಾದ ಕಟ್ಟಡದ ವ್ಯವಸ್ಥೆಯಿಲ್ಲದೆ ಮಳೆಯ ನೀರು ಕಟ್ಟಡದ ಒಳಗೆ ನುಗ್ಗಿದ ಪರಿಣಾಮ ಈ ಅವ್ಯವಸ್ಥೆಯ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ .

ಸುಮಾರು 50 ರಿಂದ 60 ವರ್ಷದ ಹಳೆಯದಾದ ಡಿಆರ್ ಎಂ ಕಾಲೇಜಿನ ಪಕ್ಕದಲ್ಲಿರುವ ಕಟ್ಟಡದಲ್ಲೇ ಮೌಲಾನ್ ಆಜಾದ್ ಆಂಗ್ಲ ಮಾಧ್ಯಮ ಶಾಲೆಯನ್ನು ಕಳೆದ 5ವರ್ಷಗಳಿಂದ ನಡೆಯುತ್ತಿದೆ.ಸುಮಾರು ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಆರನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ .ಸುಮಾರು ಮುನ್ನೂರು ವಿದ್ಯಾರ್ಥಿಗಳಿರುವ ಈ ಶಾಲೆಯಲ್ಲಿ ಕೊಠಡಿಗಳ ಸಂಖ್ಯೆ ಕೇವಲ ಮೂರು.ಕನಿಷ್ಠವೆಂದರೂ ಮುನ್ನೂರು ವಿದ್ಯಾರ್ಥಿಗಳಿಗೆ 6 ರಿಂದ 7ಕೊಠಡಿ ಬೇಕೇ ಬೇಕು.ಆದರೆ ಇಲ್ಲಿರುವುದು 3 ಕೊಠಡಿಗಳು ಮಾತ್ರ ಅದು ಮಳೆ ಬಂದರೆ ಸೋರುವ ಕೊಠಡಿಗಳು ಯಾವ ಸಂದರ್ಭದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಟ್ಟಡಗಳು ಮೇಲೆ ಬೀಳುತ್ತದೆಯೋ ಗೊತ್ತಿಲ್ಲ .ಜೀವದ ಭಯದಲ್ಲಿ ಇಲ್ಲಿನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಡಬೇಕಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ .ಈಗಾಗಲೇ 2ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಈ ಹಣದಿಂದ ಸುಸಜ್ಜಿತವಾದ ಕಟ್ಟಡಗಳನ್ನ ನಿರ್ಮಾಣ ಮಾಡುವಲ್ಲಿ ಮುಂದಾಗುತ್ತಿಲ್ಲ ಎಂದು ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮ್ಮ ಆಕ್ರೋಶವನ್ನು ಹೊರಹಾಕಿದರು .

ನಿನ್ನೆಯ ದಿನ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶದ ಕಟ್ಟೆ ಒಡೆಯಿತು .ಡಿ ಆರ್ ಎಂ  ಕಾಲೇಜಿನಿಂದ ತಾಲ್ಲೂಕು ದಂಡಾಧಿಕಾರಿ ಕಚೇರಿಯವರೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ತಮಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು .ನಂತರ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಕೆಲಹೊತ್ತು ವಿದ್ಯಾರ್ಥಿಗಳು ಮತ್ತು ಪೋಷಕರು ಧರಣಿ ಸತ್ಯಾಗ್ರಹ ನಡೆಸಿದರು.

ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮನವೊಲಿಸುವ ಪ್ರಯತ್ನ ತಾಲ್ಲೂಕು ದಂಡಾಧಿಕಾರಿಗಳ ಡಾಕ್ಟರ್ ಅಶ್ವತ್ ಎಂ. ಬಿ ಮಾಡಿದರಾದರೂ ವಿದ್ಯಾರ್ಥಿಗಳು ಮಾತ್ರ ತಮ್ಮ ಪಟ್ಟು ಬಿಡಲಿಲ್ಲ .ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಂದು ಸ್ಪಷ್ಟೀಕರಣ ನೀಡುವವರೆಗೂ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಬಿಗಿ ಪಟ್ಟು ಹಿಡಿದರು.ಮಧ್ಯಾಹ್ನ 2ಗಂಟೆಯವರೆಗೂ ವಿದ್ಯಾರ್ಥಿಗಳು ಬಿಸಿಲಿನಲ್ಲೇ ಧರಣಿ ಸತ್ಯಾಗ್ರಹ ನಡೆಸಿದರು .ತಾಲ್ಲೂಕು ಕಚೇರಿಯ ಮುಂಭಾಗದಲ್ಲೇ ಮಧ್ಯಾಹ್ನದ ಊಟವನ್ನೂ ಮಾಡಿದರು .ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ದಾದಾ ಖಲಂದರ್ ರವರು ಮಾತನಾಡಿ ಮೌಲಾನಾ ಆಜಾದ್ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಇದುವರೆಗೂ ಆಳುವಂಥ ಸರ್ಕಾರ ಅಗತ್ಯ ಮೂಲಭೂತ ಸೌಲಭ್ಯವನ್ನು ಒದಗಿಸಿ ಕೊಟ್ಟಿಲ್ಲ .ಇಲ್ಲಿ ಎಲ್ಲಾ ಧರ್ಮದ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ .ಇವರಿಗೆ ಇದುವರೆಗೂ ಸುಸಜ್ಜಿತವಾದ ಕಟ್ಟಡದ ವ್ಯವಸ್ಥೆ ಇಲ್ಲ .ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲ .ಇಲ್ಲಿನ ಮಕ್ಕಳಿಗೆ ಬಿಸಿ ಊಟದ ವ್ಯವಸ್ಥೆಯಿಲ್ಲ .ಸಮರ್ಪಕವಾದ ನೀರಿನ ವ್ಯವಸ್ಥೆಯಿಲ್ಲ ಮತ್ತು ಶೌಚಾಲಯದ ವ್ಯವಸ್ಥೆ ಅಂತೂ ಕೇಳಲೇ ಬೇಡಿ .ಮಳೆ ಬಂದರೆ ಇಲ್ಲಿನ ವಿದ್ಯಾರ್ಥಿಗಳು ಕಟ್ಟಡದ ಒಳಗೆ ನುಗ್ಗಿರುವ ನೀರಿನಲ್ಲೇ ಶಿಕ್ಷಣ ಪಡೆಯಬೇಕಾಗಿದೆ .ಮಳೆ ಹಾನಿಯಾದ ಪ್ರದೇಶಗಳಿಗೆ ಜನಪ್ರತಿನಿಧಿಗಳು ಭೇಟಿ ನೀಡುತ್ತಾರೆ .ಆದರೆ ಮೌಲಾನ್ ಆಜಾದ್ ಶಾಲೆಯ ಕಟ್ಟಡದಲ್ಲಿ ಮಳೆಯ ನೀರು ನುಗ್ಗಿ ಅದರಲ್ಲೇ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಅಳಲನ್ನು ಕೇಳಲು ಇದುವರೆಗೂ ಯಾವ ಜನಪ್ರತಿನಿಧಿಗೂ ಬಂದಿಲ್ಲ ಹಾಗೂ ಸೌಜನ್ಯಕ್ಕಾದರೂ ವಿದ್ಯಾರ್ಥಿಗಳ ಅಳಲನ್ನು ಕೇಳಲಿಲ್ಲ .ಏಕೆ ?ಇವರಿಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಇಚ್ಛೆ ಇಲ್ಲವೇ ?ಇಲ್ಲಿನ ಮಕ್ಕಳು ಸುಸಜ್ಜಿತವಾದ ಕಟ್ಟಡದಲ್ಲಿ ನುರಿತ ಶಿಕ್ಷಕರಿಂದ ಶಿಕ್ಷಣ ಪಡೆಯುವ ಅರ್ಹತೆ ಹೊಂದಿಲ್ಲ ವೇ ?ಹಾಗಾದರೆ ಏಕೆ ಮೌಲಾನ್ ಆಜಾದ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕುಂದು-ಕೊರತೆಗಳನ್ನು ಆಲಿಸಲು ಅಧಿಕಾರಿಗಳಾಗಲಿ,ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದಿಲ್ಲ ?ಇದು ಪ್ರಜಾತಂತ್ರ ವ್ಯವಸ್ಥೆಗೆ ಒಳ್ಳೆಯ ಬೆಳವಣಿಗೆಯಲ್ಲ .ಎಲ್ಲರಿಗೂ ಉತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಪ್ರತಿ ಶಾಲೆಗಳಿಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಬೇಕು ಅಲ್ಲಿನ ಕುಂದು ಕೊರತೆಗಳನ್ನು ಆಲಿಸಬೇಕು ಇದು ಅವರ ಕರ್ತವ್ಯ ಅಲ್ಲವೇ ?ಎಂದರು. 
ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಮೌಲಾನ್ ಆಜಾದ್ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಅಳಲನ್ನು ಆಲಿಸದೆ ಇರುವುದು ಮತ್ತು ಅಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸದೇ ಇರುವುದನ್ನು ಖಂಡಿಸಿ ಇಂದು ನಾವು ವಿದ್ಯಾರ್ಥಿಗಳೊಂದಿಗೆ ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದೇವೆ ಎಂದು ನಗರಸಭಾ ಸದಸ್ಯ ದಾದಾ ಖಲಂದರ್ ಹೇಳಿದರು .

ನಂತರ ಸ್ಥಳಕ್ಕೆ ಆಗಮಿಸಿದ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ್ ಧರಣಿ ನಿರತ ವಿದ್ಯಾರ್ಥಿಗಳು ಹಾಗೂ ಪೋಷಕರ ಅಳಲನ್ನು ಆಲಿಸಿ ಮಾತನಾಡಿದ ಅವರು ಶಾಲಾ ಕಟ್ಟಡಕ್ಕಾಗಿ ಜಾಗದ ಪರಿಶೀಲನೆ ನಡೆಯುತ್ತಿದೆ.ಜಾಗ ಸಿಕ್ಕ ಕೂಡಲೇ ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸುತ್ತವೆ.ಈಗಾಗಲೇ ಅನುದಾನ ಸಿದ್ಧವಾಗಿದ್ದು .ಶೀಘ್ರದಲ್ಲೇ ವಿದ್ಯಾರ್ಥಿಗಳ ಸಮಸ್ಯೆಗೆ ಶಾಶ್ವತವಾದ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇವೆ.ತಾತ್ಕಾಲಿಕ ಕಟ್ಟಡದಲ್ಲಿ ಮಳೆ ನೀರು ನುಗ್ಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಅಲ್ಲದೆ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವ ವ್ಯವಸ್ಥೆಯನ್ನ ತುರ್ತಾಗಿ ಮಾಡಲಾಗುತ್ತದೆ ಎಂಬ ಭರವಸೆಯನ್ನು ನೀಡಿದರು .ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಧರಣಿಯನ್ನು ವಾಪಸ್  ಪಡೆದರು.
ಏನೇ ಹೇಳಿ ಶಿಕ್ಷಣ ನೀಡುವ ಸಂದರ್ಭದಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡದೆ ಎಲ್ಲರಿಗೂ ಅಗತ್ಯ ಮೂಲಭೂತ ಸೌಲಭ್ಯದೊಂದಿಗೆ ಸುಸಜ್ಜಿತವಾದ ಕಟ್ಟಡದಲ್ಲಿ ಉತ್ತಮ ಶಿಕ್ಷಣ ನೀಡುವಂತಾಗಲಿ ಎಂಬುದು ನಮ್ಮ ಮಾಧ್ಯಮದ ಆಶಯವಾಗಿದೆ.

ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಎಂ.ಆರ್ ಮುಜಮ್ಮಿಲ್,ಆಸಿಫ್ ಜುನೈದಿ, ಜಪ್ರುಲ್ಲಾ ಜಬ್ಬಿವುಲ್ಲಾ, ಉಮರ್ ಫಾರೂಕ್, ಮುಸ್ತಾಫ್,ಜಹೀರ್,ಮುಸ್ತಫಾ.ಇದ್ದರು  

Post a Comment

0 Comments