ಜಿಲ್ಲೆಯಲ್ಲಿ ಯಾವುದೇ ನಕಲಿ ಪ.ಜಾತಿ ಪ್ರಮಾಣ ಪತ್ರ ವಿತರಣೆ ಆಗಿಲ್ಲ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ.

 
ದಾವಣಗೆರೆ ಸೆ.21 (ಕರ್ನಾಟಕ ವಾರ್ತೆ)
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಣೆಯ ಸಂದರ್ಭದಲ್ಲಿ ದಾಖಲೆಗಳನ್ನು ಪರಿಶೀಲಿಸುವ ಮೂಲಕ ನೈಜ ಪರಿಶಿಷ್ಟ ಜಾತಿಯ ಜನರಿಗೆ ಪ್ರಮಾಣಪತ್ರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. 
ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಡ ಜಂಗಮರ ಹೆಸರಿನಲ್ಲಿ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ನಕಲಿ ಎಸ್.ಸಿ ಪ್ರಮಾಣ ಪತ್ರ ವಿತರಣೆ ಆಗಿಲ್ಲ, ಒಂದು ವೇಳೆ ಅರ್ಜಿ ಸಲ್ಲಿಸಿದ್ದರೂ ಕೂಡ ಆ ರೀತಿಯ ಅರ್ಜಿಗಳ ದಾಖಲೆಗಳನ್ನು ಖುದ್ದಾಗಿ ತಹಶೀಲ್ದಾರರು ಕೂಲಂಕುಷವಾಗಿ ಪರಿಶೀಲಿಸಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ನಕಲಿ ಎಸ್.ಸಿ ಪ್ರಮಾಣ ಪತ್ರ ಪಡೆದವರ ಮಾಹಿತಿ ದೊರೆತರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಹುಲ್ಲುಮನಿ ತಿಮ್ಮಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ ಸೇರಿದಂತೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಹಾಜರಿದ್ದರು.

Post a Comment

0 Comments