ಬೆಳ್ಳೂಡಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ.!!


ಹರಿಹರ:ತಾಲ್ಲೂಕಿನ ಬೆಳ್ಳೂಡಿ ಗ್ರಾಮ ಪಂಚಾಯಿತಿ 2020-21 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಇದೆ 26 ನೇ ತಾರೀಕು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 5ಲಕ್ಷ ರೂಪಾಯಿಗಳ ಪ್ರೇೂತ್ಸಾಹ ಧನ ನೀಡಿ ಗೌರವಿಸಲಿದ್ದಾರೆ.

ಗ್ರಾಮ ಪಂಚಾಯಿತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯಿತಿಗಳನ್ನು ಪ್ರೇೂತ್ಸಾಹಿಸಲು 2013-14ನೇ ಸಾಲಿನಿಂದ ಪ್ರತಿ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿ 5 ಲಕ್ಷ ರೂ ಪ್ರೋತ್ಸಾಹ ಧನ ನೀಡಿ ಗೌರವಿಸುತ್ತಾರೆ.
2020-21 ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡುವ ಸಂಬಂಧ ಅಂಕಗಳ ಪ್ರಶ್ನಾವಳಿಗಳನ್ನು ಗೋಗಲ್ ಫಾರಂ ತಂತ್ರಾಂಶದಿಂದ ಉತ್ತರಿಸುವ ಮೂಲಕ ರಾಜ್ಯದ ಗ್ರಾಮ ಪಂಚಾಯತಿಗಳಿಂದ ಅರ್ಜಿಗಳನ್ನು ಉಲ್ಲೇಖ(1) ಪತ್ರಗಳನ್ವಯ ಆಹ್ವಾನಿಸಲಾಗಿರುತ್ತದೆ.ಅದರಂತೆ ಬೆಳ್ಳೂಡಿ ಗ್ರಾಮ ಪಂಚಾಯಿತಿ ಸೇರಿದಂತೆ ತಾಲ್ಲೂಕಿನ ಉಳಿದ ಕೆಲವು ಗ್ರಾಮ ಪಂಚಾಯಿತಿಗಳು ಅರ್ಜಿ ಸಲ್ಲಿಸಿದ್ದು ಈ ಗ್ರಾಮ ಪಂಚಾಯತಿಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ತಾಲ್ಲೂಕಿನ 5ಗ್ರಾಮ ಪಂಚಾಯತಿಗಳನ್ನು ಪ್ರಾರ್ಥಮಿಕ ಹಂತದಲ್ಲಿ ಆಯ್ಕೆ ಮಾಡಿ, ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಿಕೊಡಲಾಗಿತ್ತು.

ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದ ತಂಡವು ಮಾರ್ಗಸೂಚಿಗಳನುಸಾರ ಸ್ಥಳ /ದಾಖಲೆಗಳನ್ನು ಪರಿಶೀಲನೆ ಮಾಡಿ ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿ,ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯು ದಿನಾಂಕ 29.11.2021ರ ಆರ್ಥಿಕ ಇಲಾಖೆಯ ಹಿಂಬರಹ ಹಾಗೂ ಉಲ್ಲೇಖ(2)ಪತ್ರದನ್ವಯ ಹಳೆಯ 176 ತಾಲ್ಲೂಕುಗಳಿಗೆ ಮಿತಿಗೊಳಿಸಿ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯಿತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿ ಶಿಫಾರಸ್ಸು  ಮಾಡಿರುತ್ತಾರೆ.
ಅದರಂತೆ ಪ್ರಸ್ತುತ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಶಿಫಾರಸು ಮಾಡಲಾದ ಪ್ರತಿ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಗಳನ್ನು ದಿನಾಂಕ 18.04.2022 ರಂದು ನಡೆದ ರಾಜ್ಯಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಮಂಡಿಸಿ,ಅನುಮೋದಿಸಿ 2020-21 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳ್ಳೂಡಿ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಲಾಗಿರುತ್ತದೆ.

ಆಯ್ಕೆಯಾದ ಗ್ರಾಮ ಪಂಚಾಯಿತಿಗೆ 2021-22 ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಅಗ್ರಪ್ರಶಸ್ತಿ ಲೆಕ್ಕಶೀರ್ಷಿಕೆ 2515-00-102-0-11 ಅಡಿ ಒದಗಿಸಿದ ಪ್ರಸ್ತುತ ಎಸ್.ಬಿ.ಐ.ಬ್ಯಾಂಕ್ ಖಾತೆ ಸಂಖ್ಯೆ 64062923099 ಯಲ್ಲಿರಿಸಿದ 8.80 ಕೇೂಟಿ ಅನುದಾನದಲ್ಲಿ 5.00 ಲಕ್ಷ  ಗಳಂತೆ ಪ್ರಶಸ್ತಿಯ ಹಣ ನೀಡಿ ಗೌರವಿಸಲಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ 21.09.22 ರಂದು ಹಣವನ್ನ ಬಿಡುಗಡೆ ಮಾಡಿದ್ದು ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾದ ಗ್ರಾಮ ಪಂಚಾಯತಿಗಳಿಗೆ ಪ್ರೇೂತ್ಸಾಹ ಧನವನ್ನು ನೀಡಿ ಗೌರವಿಸಲಿದ್ದಾರೆ.

ಹರಿಹರ ತಾಲ್ಲೂಕಿನ ಬೆಳ್ಳೊಡಿ ಗ್ರಾಮಪಂಚಾಯ್ತಿ ಇತ್ತೀಚಿನ ದಿನದಲ್ಲಿ ಜನಸ್ನೇಹಿ ಗ್ರಾಮ ಪಂಚಾಯ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು ತಾಲ್ಲೂಕಿನಲ್ಲಿ ಉತ್ತಮ ಗ್ರಾಮ ಪಂಚಾಯ್ತಿ ಎನಿಸಿಕೊಳ್ಳುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿದೆ.

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಬೆಳ್ಳೂಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಸದಸ್ಯರು ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಪಂಚಾಯತಿಯ ಸರ್ವ ಸಿಬ್ಬಂದಿಗಳಿಗೆ ಹಾಗೂ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸಹಕರಿಸಿದ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಗ್ರಾಮಸ್ಥರಿಗೆ  ನಮ್ಮ ಪತ್ರಿಕಾ ಮಾಧ್ಯಮದ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.💐💐💐💐

ಪ್ರಕಾಶ್ ಮಂದಾರ 
ಸಂಪಾದಕರು 
8880499904

Post a Comment

0 Comments