ಅಸಹಾಯಕರ ಮನೆ ಬಾಗಿಲಿಗೆ ಧರ್ಮಸ್ಥಳದ ಜನಮಂಗಲ ಪರಿಕರಗಳು;ವಿ.ವಿಜಯಕುಮಾರ್.



ಹರಿಹರ:ಸಮಾಜದಲ್ಲಿ ಸೌಲಭ್ಯಗಳಿಂದ ವಂಚಿತವಾಗಿರುವ ಅಸಹಾಯಕರನ್ನು ಗುರುತಿಸಿ ಅವರಿಗೆ ಅಗತ್ಯವಿರುವ ಸಲಕರಣೆಗಳನ್ನು ಮನೆಬಾಗಿಲಿಗೆ ತಲುಪಿಸುವ ಕಾರ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ವೀರೇಂದ್ರ ಹೆಗ್ಡೆಯವರು ಜನ ಮಂಗಳ ಕಾರ್ಯಕ್ರಮದ ಮೂಲಕ ನಿರಂತರವಾಗಿ ಒದಗಿಸುವ ಮಹತ್ವದ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕರಾದ ವಿ. ವಿಜಯಕುಮಾರ್ ನಾಗನಾಳ ಅವರು ಹೇಳಿದರು.
ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಲಾಪುರ  ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಮಂಗಳ ಸಲಕರಣೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪರಮ ಪೂಜ್ಯರ ಆಶಯದಂತೆ ಅನಾರೋಗ್ಯ, ಅಪಘಾತಗಳಿಂದ ನಡೆದಾಡಲು ಸಮಸ್ಯೆ ಇರುವ ಅರ್ಹರನ್ನು ಗುರುತಿಸಿ ಅವರಿಗೆ ಬೇಕಾದ ವಾಕರ್ ,ವೀಲ್ ಚೇರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ನಂತಹ ಪರಿಕರಗಳನ್ನು ಉಚಿತವಾಗಿ ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲ್ಲೂಕು ಯೋಜನಾಧಿಕಾರಿ ಗಣಪತಿ ಮಾಳಂಜಿ ಅವರು ಮಾತನಾಡಿ ಜನಮಂಗಳ ಕಾರ್ಯಕ್ರಮದನ್ವಯ ತಾಲ್ಲೂಕು ಮಟ್ಟದಲ್ಲಿ ಈಗಾಗಲೇ 64 ಅಸಹಾಯಕ ಜನರಿಗೆ ಅಗತ್ಯವಿರುವ ಸಲಕರಣೆಗಳನ್ನು ವಿತರಿಸಲಾಗಿದೆ ಎಂದರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಮಂಜಪ್ಪ, ಮೇಲ್ವಿಚಾರಕರಾದ ಪ್ರಸನ್ನ,ಸೇವಾ ಪ್ರತಿನಿಧಿ ಗೀತಾ, ಆಶಾ ಕಾರ್ಯಕರ್ತೆ ಪ್ರೇಮಾ, ಒಕ್ಕೂಟದ ಅಧ್ಯಕ್ಷರಾದ ಧರ್ಮಪ್ಪ, ಉಪಾಧ್ಯಕ್ಷರಾದ ಚನ್ನಬಸಪ್ಪ ಒಕ್ಕೂಟದ ಕೋಶಾಧಿಕಾರಿ ರೇಣುಕಮ್ಮ ಮತ್ತಿತರರು ಪಾಲ್ಗೊಂಡಿದ್ದರು ವಲಯದ ಮೇಲ್ವಿಚಾರಕ ಸಂತೋಷ್ ಸ್ವಾಗತಿಸಿ ವಂದಿಸಿದರು.

Post a Comment

0 Comments