ಹರಿಹರಕ್ಕೆ ಐವತ್ತು ಹಾಸಿಗೆಗಳ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮಂಜೂರು.!!

ಹರಿಹರ:ಹರಿಹರ ತಾಲ್ಲೂಕಿನ ಜನತೆಯ ಬಹುದಿನದ ಬೇಡಿಕೆಯಾದ ಐವತ್ತು ಹಾಸಿಗೆ ಸಾಮರ್ಥ್ಯದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಕೇಂದ್ರ ಪುರಸ್ಕೃತ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಇಪ್ಪತ್ತು ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ದಾವಣಗೆರೆ ಸಂಸದ ಜಿಎಂ ಸಿದ್ದೇಶ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಜೂರಾತಿ ಆದೇಶ ಈಗಾಗಲೇ ನೀಡಿದೆ ಎಂದು ಇದೇ ಸಂದರ್ಭದಲ್ಲಿ ಸಂಸದರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ, ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ ಉಪಸ್ಥಿತರಿದ್ದರು.

Post a Comment

0 Comments