ಐಕ್ಯತೆ ಪಾದಯಾತ್ರೆಯಲ್ಲಿ ಗಮನ ಸೆಳೆದ ಬೇಳೂರು ಗೋಪಾಲಕೃಷ್ಣ.!!


ಸಾಗರ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶವನ್ನು ಒಗ್ಗೂಡಿಸಲು ದೇಶದ ಐಕ್ಯತೆ ಕಾಪಾಡಲು ಭಾರತ ಜೇೂಡೋ ಪಾದಯಾತ್ರೆ ಹಮ್ಮಿಕೊಂಡಿದ್ದು ಈ ಯಾತ್ರೆಯು ರಾಜ್ಯದಲ್ಲಿ  22 ದಿನಗಳ ಕಾಲ ಪ್ರಮುಖ ಜಿಲ್ಲೆಗಳ ಮೂಲಕ ಹಾದು ಹೋಗಲಿದೆ.

ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು,ರಾಹುಲ್ ಗಾಂಧಿ ಜೊತೆಗೆ ರಾಜ್ಯದ ನಾಯಕರು ಕೈ ಜೋಡಿಸಿದ್ದಾರೆ.ಇದರ ನಡುವೆ ರಾಹುಲ್ ಗಾಂಧಿ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ರಾಹುಲ್ ಗಾಂಧಿ ಅವರೊಂದಿಗೆ ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ರಾಹುಲ್ ಗಾಂಧಿ ಅವರ ಗಮನವನ್ನು ಸೆಳೆದರು.
ಈಗಾಗಲೇ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯ ಮೂಲಕ ಪಕ್ಷವನ್ನು ಬಲಪಡಿಸ ತ್ತಿರುವ ಬೇಳೂರು ಗೋಪಾಲಕೃಷ್ಣ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ನೇರವಾದ ಚುನಾವಣೆಯ ಹೋರಾಟವನ್ನ ನಡೆಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರು ಬೇಳೂರು ಗೋಪಾಲಕೃಷ್ಣ ಈಶ್ವರಪ್ಪ ಒಲವನ್ನು ಹೊಂದಿದ್ದು ಮುಂದಿನ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ರಾಜ್ಯದಲ್ಲಿ ಹನ್ನೊಂದನೇ ದಿನದ ಐಕ್ಯತಾ ಪಾದಯಾತ್ರೆಯಲ್ಲಿ ಬೇಳೂರು ಗೋಪಾಲಕೃಷ್ಣ ಅವರು ರಾಹುಲ್ ಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಹೆಜ್ಜೆ ಹಾಕಿದ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಬೇಳೂರು ಗೋಪಾಲಕೃಷ್ಣ ಅವರು ರಾಹುಲ್ ಗಾಂಧಿ ಅವರೊಂದಿಗೆ ಕೆಲ ವಿಚಾರವನ್ನು ಚರ್ಚೆ ನಡೆಸುತ್ತಿರುವ ಹಾಗೂ ಡಿ ಕೆ ಶಿವಕುಮಾರ್ ಅವರು ಬೇಳೂರು ಗೋಪಾಲಕೃಷ್ಣ ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ನಿಮ್ಮ ಮುಂದೆ .

Post a Comment

0 Comments