ಸಾಗರ:ಸಾಗರ ತಾಲ್ಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುತ್ತಾದಿಂಬ ಗ್ರಾಮದ ಎಂ.ಎಲ್ ರಮೇಶ (62) ಇಂದು ಹಿರಿಯೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಎಂ.ಎಲ್ ರಮೇಶ್ ಇವರು ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಈ ಅವಘಡ ಸಂಭವಿಸಿದೆ.
ಮೃತರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದು ತಂದೆಯ ಅಪಘಾತದಿಂದ ತೀವ್ರ ನೊಂದಿದ್ದಾರೆ.
0 Comments