ಮಂದಾರ ನ್ಯೂಸ್ ಕರ್ನಾಟಕ.
ರಾಜ್ಯದ ಪ್ರತಿ ಜಿಲ್ಲೆಯಲ್ಲಿರುವ ಭ್ರಷ್ಟ ಅಧಿಕಾರಿಗಳ ಮಾಹಿತಿ ಸಂಪೂರ್ಣ ಮಾಹಿತಿಗಳನ್ನ ಪಡೆದು ಅವರುಗಳ ಪಟ್ಟಿಗಳನ್ನು ಕರ್ನಾಟಕ ಲೋಕಾಯುಕ್ತ ಸಿದ್ಧ ಮಾಡಿಕೊಂಡು ಇಟ್ಟುಕೊಂಡಿದೆ.
ಭ್ರಷ್ಟ ಅಧಿಕಾರಿಗಳ ಆಸ್ತಿಯ ವಿವರಗಳನ್ನು ಸಂಗ್ರಹಿಸಿ ಅವರ ಆಸ್ತಿ ಸಂಪಾದನೆಯ ಮಾರ್ಗವನ್ನು ಪತ್ತೆ ಹಚ್ಚಿ ಲೋಕಾಯುಕ್ತರಿಂದ ಅನುಮತಿ ಪಡೆದು ನ್ಯಾಯಾಲಯದಿಂದ ವಾರಂಟ್ ಪಡೆಯುವ ಮೂಲಕ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಸೂಕ್ತ ತನಿಖೆ ಕೈಗೊಂಡು ಭ್ರಷ್ಟರಿಗೆ ಶಿಕ್ಷೆ ಹಾಗೂ ಹಾಗೆ ನೋಡಿಕೊಳ್ಳಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಖಡಕ್ ಸೂಚನೆಯನ್ನು ತಮ್ಮ ಇಲಾಖೆಯ ನೌಕರಿಗರಿಗೆ ನೀಡಿದ್ದಾರೆ.
ಲೋಕಾಯುಕ್ತ ಕಚೇರಿಯಲ್ಲಿ ಎರಡು ದಿನಗಳ ಕಾರ್ಯಗಾರವನ್ನು ಶುಕ್ರವಾರದಂದು ಉದ್ಘಾಟಿಸಿ ಮಾತನಾಡಿದ ಅವರು ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ಭ್ರಷ್ಟಾಚಾರ ಪ್ರತಿಬಂಧ ಅಧಿನಿಯಮ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಗಾರ ಇದಾಗಿತ್ತು.
ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ವರ್ಗಾವಣೆಯ ಭಯವಿಲ್ಲ, ಅನ್ಯರ ಒತ್ತಡವಿರುವುದಿಲ್ಲ, ಕೆಲಸದಿಂದ ಅಮಾನತ್ತಾಗುತ್ತೇವೆ ಎಂಬ ಚಿಂತೆ ಇರುವುದಿಲ್ಲ ಮುಕ್ತವಾಗಿ ಕೆಲಸ ಮಾಡುವ ಅವಕಾಶವಿರುತ್ತದೆ.
ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸೈನಿಕರಂತೆ ಹೋರಾಟ ನಡೆಸಬೇಕು ನನ್ನ ಅವಧಿಯಲ್ಲಿ ಯಾವುದೇ ಉತ್ತಮ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾರೆ ಒಂದು ವೇಳೆ ಕೆಲಸದಿಂದ ವಿಮುಖಗೊಂಡರೆ ಅವರನ್ನು ತತಕ್ಷಣವೇ ಯಾವುದೇ ಮುಲಾಜಿ ಇಲ್ಲದೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುವುದು ಎಂಬ ಎಚ್ಚರಿಕೆಯನ್ನು ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಲೋಕಾಯುಕ್ತ ಸಂಸ್ಥೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ನೀಡಿದರು.
ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಬೇಟೆಯಾಡಿ. ಬೀಜ ಕೇಂದ್ರಗಳು ,ಸರ್ಕಾರಿ ಆಸ್ಪತ್ರೆಗಳು, ಉಪ ನೊಂದಾವಣೆ ಅಧಿಕಾರಿಗಳ ಕಚೇರಿಗಳ ಮೇಲೆ ಹದ್ದಿನ ಕಣ್ಣು ಇಡಬೇಕಾಗಿದೆ. ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಖಾತಾ ಬದಲಾವಣೆಗೆ ಜನಸಾಮಾನ್ಯರನ್ನು ಅಲೆದಾಡಿಸುತ್ತಾರೆ ಅಂತ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಬೇಕಾಗಿದೆ. ತಡ ಮಾಡದೆ ಅಂತವರ ಮೇಲೆ ಪ್ರಕರಣವನ್ನು ದಾಖಲಿಸಿ ಪಾಠ ಕಲಿಸಿ. ಈಗಾಗಲೇ ನಿಮ್ಮೆಲ್ಲರ ಕೆಲಸದ ಮೇಲೆ ಒಂದು ಕಣ್ಣನ್ನ ಇಟ್ಟಿದ್ದೇನೆ. ಪ್ರತಿ ತಿಂಗಳ ಹಾಗೂ ದ್ವೈ ಮಾಸಿಕ ವರದಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನಿಮ್ಮ ನಿಮ್ಮ ವ್ಯಾಪ್ತಿಗಳಲ್ಲಿ ಭ್ರಷ್ಟಾಚಾರ ಹೆಚ್ಚು ನಡೆದರೆ ಅದಕ್ಕೆ ನೀವೇ ಹೊಣೆಯಾಗುತ್ತೀರಾ ಎಂದು ಲೋಕಾಯುಕ್ತರು ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈಗಾಗಲೇ ರಾಜ್ಯದಲ್ಲಿ ಭ್ರಷ್ಟಾಚಾರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಪ್ರತಿ ತಿಂಗಳು 300 -400 ಪ್ರಕರಣಗಳು ದಾಖಲಾಗುತ್ತಿವೆ. ಇದು ರಾಜ್ಯದ ಜನರು ಲೋಕಾಯುಕ್ತ ಸಮಿತಿಯ ಮೇಲೆ ಜನರಿಟ್ಟಿರುವ ನಂಬಿಕೆಯಾಗಿದೆ. ಕಳೆದ ಒಂದೇ ತಿಂಗಳು 844 ಪ್ರಕರಣ ದಾಖಲಾಗಿದೆ. ಜನರ ನಿರೀಕ್ಷೆ ಮತ್ತು ಭರವಸೆಯಂತೆ ಕೆಲಸ ಮಾಡುವ ಜವಾಬ್ದಾರಿ ಲೋಕಾಯುಕ್ತ ಸಂಸ್ಥೆ ಮೇಲಿದೆ.
ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ನೀಡಿರುವ ಖಡಕ್ ಎಚ್ಚರಿಕೆ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡಕ ಹುಟ್ಟಿಸಿದೆ. ಈಗಾಗಲೇ ರಾಜ್ಯದ ಎಲ್ಲಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ಲೋಕಾಯುಕ್ತರು ಸಿದ್ಧಪಡಿಸಿಕೊಂಡು ಇಟ್ಟುಕೊಂಡಿದ್ದಾರೆ. ಯಾವ ಕ್ಷಣದಲ್ಲಾದರೂ ಲೋಕಾಯುಕ್ತರ ಬಲೆಯಲ್ಲಿ ದೊಡ್ಡ ದೊಡ್ಡ ತಿಮಿಂಗಳುಗಳು ಬೀಳುವುದರಲ್ಲಿ ಅನುಮಾನವಿಲ್ಲ.
ರಾಜ್ಯದ ಜನರ ನಿರೀಕ್ಷೆಯಂತೆ ಲೋಕಾಯುಕ್ತ ಮತ್ತೆ ಪುಟ್ಟಿದೇಳುವ ದಿನಗಳು ದೂರವಿಲ್ಲ. ಪ್ರಿಯ ಓದುಗರ ಮಿತ್ರರೇ ನಿಮ್ಮ ನಿಮ್ಮ ವ್ಯಾಪ್ತಿಯಲ್ಲಿರುವ ಭ್ರಷ್ಟ ಅಧಿಕಾರಿಗಳ ಮಾಹಿತಿಯನ್ನ ಸಂಗ್ರಹಿಸಿಟ್ಟುಕೊಳ್ಳಿ. ಕೂಡಲೇ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿ ಇಲ್ಲದೆ ದೂರನ್ನ ದಾಖಲಿಸಿ. ಇದು ನಮ್ಮೆಲ್ಲರ ಕರ್ತವ್ಯವಾಗಿದೆ. ಭ್ರಷ್ಟಾಚಾರ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಲೋಕಾಯುಕ್ತ ಸಂಸ್ಥೆಯೊಂದಿಗೆ ಕೈಜೋಡಿಸೋಣ.
ಮಂದಾರ ನ್ಯೂಸ್ ವೆಬ್ ಪೋರ್ಟಬಲ್ ಸುದ್ದಿ ವಾಹಿನಿ ಹಾಗೂ ಮಂದಾರ ನ್ಯೂಸ್ youtube ಚಾನೆಲ್ ಈಗಾಗಲೇ ಒಂದು ಹೆಜ್ಜೆ ಮುಂದಿಟ್ಟಾಗಿದೆ. ನಮ್ಮೆಲ್ಲ ಓದುಗರ ಮಿತ್ರರು ಹೆಜ್ಜೆ ಇಡಬೇಕಾಗಿದೆ. ಬನ್ನಿ ಲೋಕಾಯುಕ್ತ ಸಂಸ್ಥೆಯೊಂದಿಗೆ ಹೆಜ್ಜೆ ಹಾಕೋಣ.
0 Comments