ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ವಿಧಿವಶ.!

ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ (100) ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅಸ್ವಸ್ಥರಾಗಿದ್ದ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 3:30ಕ್ಕೆ ವಿಧಿವಶರಾಗಿದ್ದಾರೆ.
ಹೀರಾಬೇನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯಗಳ ತಿಳಿಸಿ ತಾಯಿಯ ಪಾದ ತೊಳೆದು ಪೂಜಿಸಿ ಆಶೀರ್ವಾದ ಪಡೆದಿದ್ದರು.

ಸದ್ಯ ಪಶ್ಚಿಮ ಬಂಗಾಳದ ಪ್ರವಾಸದಲ್ಲಿದ್ದ ಪ್ರಧಾನಿಯವರು ತಮ್ಮ ತಾಯಿಯವರ ನಿಧಾನದ ಸುದ್ದಿ ತಿಳಿದಾಕ್ಷಣ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ನಿಧಾನಕ್ಕೆ ಗಣ್ಯರೆಲ್ಲರೂ ಸಂತಾಪವನ್ನು ಸೂಚಿಸುತ್ತಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪೂಜ್ಯ ತಾಯಿ ಶತಾಯುಷಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು ದೇಶಕ್ಕೆ ಹೆಮ್ಮೆ ತಂದ ಪುತ್ತರಿಗೆ ಜನ್ಮ ನೀಡಿದ ಮಹಾ ತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Post a Comment

0 Comments