ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮಾರ್ಚ್ ಅಂತ್ಯದ ವೇಳೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ. ಕರ್ನಾಟಕದಲ್ಲಿ ಶಾಂತಿಸುವಸ್ತೆ ಚೆನ್ನಾಗಿರುವ ಹಿನ್ನೆಲೆಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ಆಲೋಚನೆ ಮಾಡಿದೆ.
ದಕ್ಷಿಣ ಭಾರತದಲ್ಲಿ ಕರ್ನಾಟಕ ವಿಧಾನಸಭೆಗೆ ಮಾತ್ರ ಚುನಾವಣೆ ನಡೆಯುತ್ತಿರುವುದರಿಂದ ಚುನಾವಣೆಯ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೆರೆ ರಾಜ್ಯದ ಪೊಲೀಸ್ ಸಿಬ್ಬಂದಿಗಳನ್ನು ಬಳಕೆ ಮಾಡಿಕೊಳ್ಳಬಹುದು. ಎರಡು ಹಂತದ ಚುನಾವಣೆ ನಡೆಸುವ ಬದಲು ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆಸಬಹುದು. ಚುನಾವಣೆಗೆ ನಿಯೋಜನೆಯಾಗುವ ಸಿಬ್ಬಂದಿಗಳಿಗೆ ಒತ್ತಡವಾಗದಂತೆ ಕರ್ತವ್ಯ ನಿರ್ವಹಿಸಬಹುದು ಎಂಬ ಉದ್ದೇಶದಿಂದ ಒಂದೆ ಹಂತದಲ್ಲಿ ಚುನಾವಣೆ ನಡೆಸುವ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಕಳೆದ ಆರು ತಿಂಗಳುಗಳಿಂದ ರಾಜ್ಯ ವಿಧಾನಸಭೆಯ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ರಾಜ್ಯದ ಅಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡು ಈ ಸಂಬಂಧ ಸಲಹೆ ಸೂಚನೆಗಳನ್ನು ನೀಡುತ್ತಿದೆ.ಮೇ 10 ಇಲ್ಲವೇ 13ರಂದು ಚುನಾವಣೆ ನಡೆಸಿ 16ರಂದು ಫಲಿತಾಂಶ ಪ್ರಕಟ ಮಾಡುವ ಸಂಬಂಧ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.
ಈ ದಿನಾಂಕಗಳು ಅಲ್ಲದೆ ಇನ್ನು ಕೆಲವು ದಿನಾಂಕಗಳನ್ನು ಸಹಾಯಕ ಸಿದ್ಧಪಡಿಸಿಕೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೇ ಮೂರನೇ ವಾರದ ಒಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ತರಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದೆ. ಈಗಾಗಲೇ ಕೇಂದ್ರ ಚುನಾವಣಾ ಆಯೋಗ ಅಧಿಕಾರಿಗಳು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯದ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದಾರೆ.
ವೇಳಾಪಟ್ಟಿ ಪ್ರಕಟಣೆಗೂ ಮುನ್ನವೇ ಎಸ್ ಎಸ್ ಎನ್ ಸಿ, ಪಿಯುಸಿ ಪರೀಕ್ಷೆಗಳು ಸೇರಿದಂತೆ ಎಲ್ಲಾ ಹಂತದ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಆಯೋಗ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಚುನಾವಣೆಗೆ ಮತಗಟ್ಟೆಗಳಷ್ಟು, ಅವುಗಳಲ್ಲಿ ಸೂಕ್ಷ್ಮ ಅತಿಶಮ ಮತಗಟ್ಟೆಗಳನ್ನ ಗುರುತಿಸುವಿಕೆ ಸಿಬ್ಬಂದಿಗೆ ತರಬೇತಿ ನೀಡುವುದರ ಬಗ್ಗೆ ಚುನಾವಣಾ ಆಯೋಗ ರಾಜ್ಯದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ಲಭ್ಯವಾಗಿದೆ.
0 Comments