ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಪ್ರಥಮ ರಾಜ್ಯ ಸಮ್ಮೇಳನ.

ಬಂಗ್ಲೆ ಮಲ್ಲಿಕಾರ್ಜುನ್ ಸಂಸ್ಥಾಪನೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪ್ರಥಮ ರಾಜ್ಯ ಸಮ್ಮೇಳನವನ್ನು ಇದೇ ದಿನಾಂಕ 25.02.2023ರ ಸಂಜೆ ಐದು ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಮಪೂಜ್ಯ ನಿಜಗುಣ ಪ್ರಭು ತೊಂಟದಾರ್ಯ ಮಹಾ ಸ್ವಾಮೀಜಿಗಳು ಇವರ ದಿವ್ಯ ಸಾನಿಧ್ಯದಲ್ಲಿ ಹಾಗೂಮಹರ್ಷಿ ಆನಂದ ಗುರೂಜಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಪ್ರಥಮ ರಾಜ್ಯ ಸಮ್ಮೇಳನವನ್ನು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾದ ಸನ್ಮಾನ್ಯ ಶ್ರೀ ವಿ ಗೋಪಾಲ್ ಗೌಡ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ್ ಜಾರಕಿಹೊಳಿಯವರು ವಹಿಸಿಕೊಳ್ಳಲಿದ್ದಾರೆ. ಸ್ಮರಣ ಸಂಚಿಕೆಯನ್ನು(ಕಾ.ನಿ.ಪ.ದ್ವನಿ ನಡೆದು ಬಂದ ಹಾದಿ ವಿಡಿಯೋ ಬಿಡುಗಡೆ) ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಶ್ರೀಮತಿ ಬಿ ಎಲ್ ರಾಣಿ ಸಂಯುಕ್ತ ಇವರು ಬಿಡುಗಡೆಗೊಳಿಸಲಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಕೆಎಚ್ ಮುನಿಯಪ್ಪನವರು ಸ್ಮರಣ ಸಂಚಿಕೆ ಸಂದರ್ಭದಲ್ಲಿ ಉಪಸ್ಥಿತರಿರುವರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಕರ್ನಾಟಕ ಕಾರ್ಯನಿರ್ತಾ ಪತ್ರಕರ್ತ ಧ್ವನಿ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಬಂಗ್ಲಿ ಮಲ್ಲಿಕಾರ್ಜುನ್ ಅವರು ನೆರವೇರಿಸಿ ಕೊಡಲಿದ್ದಾರೆ.
ಪ್ರಥಮ ರಾಜ್ಯ ಸಮ್ಮೇಳನದಲ್ಲಿ ಪತ್ರಕರ್ತರು ಹಾಗೂ ಸಾಮಾಜಿಕ ಹೊಣೆಗಾರಿಕೆ .ಪತ್ರಕರ್ತರ ಇಂದಿನ ಸ್ಥಿತಿ-ಗತಿ, ಪೋಲಿಸ್ ಹಾಗೂ ಪತ್ರಕರ್ತರ ನಡುವಿನ ಪ್ರಸ್ತುತ ವಿದ್ಯಮಾನಗಳ ಕುರಿತು ಇವರುಗಳಿಂದ ಬೆಳಕು ಚೆಲ್ಲುವಿಕೆ, ಕುಂ. ವೀರಭದ್ರಪ್ಪ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು, ಡಾ.ಬಿ.ಕೆ ರವಿ ಸಂವಹನ ವಿಭಾಗದ ಮುಖ್ಯಸ್ಥರು ಜ್ಞಾನಭಾರತಿ, ಶ್ರೀ ಹರೀಶ್ ಗಣಪತಿ ಹೈಕೋರ್ಟಿನ ನ್ಯಾಯವಾದಿಗಳು ,ಶ್ರೀ ಪುಟ್ಟೇಗೌಡರು ಹೈಕೋರ್ಟ್ ನ್ಯಾಯವಾದಿಗಳು ಇವರುಗಳು ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಪಿ ಎಸ್ ಹರ್ಷ ಐಪಿಎಸ್, ಹಿರಿಯ ಪತ್ರಕರ್ತರು ಹಾಗೂ ಹೋರಾಟಗಾರರಾದ ಈ ಜಾಣಗೆರೆ ವೆಂಕಟರಾಮಯ್ಯ, ಟಿವಿ5 ಸುದ್ದಿ ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀ ರಮಾಕಾಂತ್ ಎ ಎಸ್, ಇವರು ವೇದಿಕೆಯನ್ನ ಹಂಚಿಕೊಳ್ಳಲಿದ್ದಾರೆ.

ಇನ್ನೂ ರಾಜ್ಯದ ಅನೇಕ ಗಣ್ಯಾತಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಇದೇ ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲಿ ಮಲ್ಲಿಕಾರ್ಜುನವರು ನಮ್ಮ ಮಾಧ್ಯಮದೊಂದಿಗೆ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಕಾರ್ಯಕ್ರಮ ಇದೇ ದಿನಾಂಕ 25-3.2023 ಸಂಜೆ 5:00 ಬೆಂಗಳೂರಿನ ಜೆ.ಸಿ ರಸ್ತೆಯ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.

Post a Comment

0 Comments