ಶಿವಮೊಗ್ಗ:-ನಗರದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಅನೇಕ ಬಿಜೆಪಿ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ– ಭದ್ರಾವತಿ ನಗರಗಳ ಮಧ್ಯೆ ಇರುವ ಸೋಗಾನೆ ಬಳಿ ₹449.22 ಕೋಟಿ ವೆಚ್ಚದಲ್ಲಿ 778.62 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 2019ರಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿತ್ತು. ಬೋಯಿಂಗ್ ನಂತಹ ದೊಡ್ಡ ವಿಮಾನ ಇಳಿಯಲು ಅವಕಾಶ ಕಲ್ಪಿಸಿ, ರನ್ ವೇ ಉದ್ದವನ್ನು 2.05 ಕಿ.ಮೀ ಬದಲಿಗೆ, 3.20 ಕಿ.ಮೀ.ಗೆ ಹೆಚ್ಚಿಸಲಾಯಿತು. ರಾತ್ರಿ ವೇಳೆ ವಿಮಾನ ಇಳಿಯುವ ಸೌಲಭ್ಯ ಕಲ್ಪಿಸಲಾಯಿತು. ಇದರಿಂದ ಯೋಜನಾ ವೆಚ್ಚ ₹ 220 ಕೋಟಿಯಿಂದ ₹449.22 ಕೋಟಿಗೆ ಏರಿಕೆಯಾಯಿತು.
ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಿದ್ದಾರೆ.
ನಂತರದಲ್ಲಿ ಕನ್ನಡದಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿ ಮಲೆನಾಡು ವೈಶಿಷ್ಟ್ಯವನ್ನು ಕೊಂಡಾಡಿದರು,
ಅಲ್ಲದೆ ಸಭೆಯಲ್ಲಿ ನೆರೆದಿದ್ದ ಸಾವಿರಾರು ಸಂಖ್ಯೆಯ ಜನರಿಂದಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಎಲ್ಲರ ಕೈಯಲ್ಲಿದ್ದ ಮೊಬೈಲ್ ಫ್ಲಾಶ್ ಲೈಟ್ ಆನ್ ಮಾಡಿಸುವುದರ ಮೂಲಕ ಬಿ.ಎಸ್ ಯಡಿಯೂರಪ್ಪ ರವರಿಗೆ ಜನ್ಮದಿನದ ಶುಭಾಶಯವನ್ನು ಕೋರಿಸಿದರು.
0 Comments