ಹರಿಹರ: ಹರಿಹರ ತಾಲೂಕು ಪಂಚಾಯತಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಕಳೆದ ಎರಡು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಜಿಡಿ ಗಂಗಾಧರಂ ಇವರನ್ನು ಮಾತೃ ಇಲಾಖೆ ತತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿ ಡಿ ಗಂಗಾಧರಂ ಇವರ ಜಾಗಕ್ಕೆ ರಟ್ಟೆ ಹಳ್ಳಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎನ್. ರವಿ ಇವರನ್ನು ಹರಿಹರ ತಾಲ್ಲೂಕ್ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಜಿ.ಡಿ ಗಂಗಾಧರ್ ಇವರು ತೋಟಗಾರಿಕೆ ಇಲಾಖೆಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದು ರಾಜ್ಯ ಸರ್ಕಾರ ಇವರನ್ನು ಮತ್ತೆ ತೋಟಗಾರಿಕೆ ಇಲಾಖೆಗೆ ವರ್ಗಾವಣೆ ಮಾಡಿದೆ.
ಕಳೆದ 15 ದಿನಗಳ ಹಿಂದೆ ತಾಲೂಕ್ ಕಂದಾಯ ಇಲಾಖೆಯ ಅಶ್ವಥ್ ಎಂ ಬಿ ಇವರನ್ನು ದಾವಣಗೆರೆಗೆ ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಪೃಥ್ವಿ ಇವರನ್ನು ನೇಮಕಗೊಳಿಸಿತ್ತು. ಈಗಾಗಲೇ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು ತಾಲ್ಲೂಕಿನಿಂದ ಕೆಲ ಇಲಾಖೆ ಅಧಿಕಾರಿಗಳು ವರ್ಗಾವಣೆಯಾಗುತ್ತಿದ್ದಾರೆ. ಮುಂದಿನ ದಿನದಲ್ಲಿ ಇನ್ನು ಹೆಚ್ಚಿನ ಅಧಿಕಾರಿಗಳು ವರ್ಗಾವಣೆಯಾಗುವ ಸೂಚನೆ ನಮ್ಮ ಮಾಧ್ಯಮಕ್ಕೆ ಲಭ್ಯವಾಗಿದೆ.
0 Comments