ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವದರ ಹೆಚ್ಚಿಸಲು ಕ್ರಮ ವಹಿಸಲಾಗುವುದು, ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಈ ಬಜೆಟ್ಟಿನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದರು.
ಬೆಂಗಳೂರು ಶಿಕ್ಷಕರ ಸದನದಲ್ಲಿ ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಾ.ಕೆ. ಸುಧಾಕರ್ ಸಂಘದ ಮನವಿ ಸ್ವೀಕರಿಸಿ ಮಾತನಾಡಿದರು.ನಾನು ಆರೋಗ್ಯ ಸಚಿವರಾದ ಬಳಿಕ ಪ್ರತಿವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1000 ಹೆಚ್ಚಿಸಲು ಪಾತ್ರವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ತಮ್ಮ ಮೊದಲ ಬಜೆಟ್ಟಿನಲ್ಲಿ ಗೌರವ ಧನವನ್ನು ಸಾವಿರಕ್ಕೆ ಹೆಚ್ಚಿಸಿದೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರು ಕೆಲ ಮನವಿಗಳನ್ನು ನೀಡಿದ್ದು ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು ಎಂದರು.
ಆಶಾ ಕಾರ್ಯಕರ್ತೆಯರ ಪ್ರತಿನಿಧಿಯಾಗಿ ನಾನು ಕೆಲಸ ಮಾಡುತ್ತೇನೆ. ಇತ್ತೀಚಿಗೆ ಬಜೆಟ್ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಯಿತು, ಈ ಚರ್ಚೆ ವೇಳೆ ಆಶಾ ಕಾರ್ಯಕರ್ತರಿಗೆ ಗೌರವಧನವನ್ನು ಹೆಚ್ಚಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಆಶಾ ಕಾರ್ಯಕರ್ತೆಯರಿಗೆ 5 ಕೋಟಿ ರೂ ಮೊತ್ತದ ಕ್ಷೇಮ ಅಭಿವೃದ್ಧಿ ನಿಧಿ ಇರಿಸಿ, ಕಾರ್ಯಕರ್ತೆಯರ ಆರೋಗ್ಯ ರಕ್ಷಣೆಗೆ ನೀಡಬೇಕು ಎಂಬ ಬೇಡಿಕೆ ಬಂದಿದೆ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ತಾಂತ್ರಿಕ ನೂನ್ಯತೆ ನಿವಾರಿಸಿ ಸರಿಯಾದ ಸಮಯಕ್ಕೆ ಗೌರವದನ ನೀಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ಕೋವಿಡ್ ಸಮಯದಲ್ಲಿ ಅನೇಕರು ವರ್ಕ್ ಫ್ರಮ್ ಹೋಮ್ ಮಾಡಿದ್ದಾರೆ. ಆದರೆ ಆಶಾ ಕಾರ್ಯಕರ್ತೆಯರು ವರ್ಕ್ ಫ್ರೇಮ್ ಸ್ಟ್ರೀಟ್ ಮಾಡಿದ್ದರು. 10 ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಅಥವಾ 60 ವರ್ಷ ವಯಸ್ಸಿನ ಬಳಿಕ ನಿವೃತ್ತಿಯಾಗಲು ಬಯಸಿದರೆ ಅವರಿಗೆ ಇಡೀ ಗಂಟು ನೀಡಲು ಕ್ರಮವಹಿಸಬೇಕು ಎಂಬ ಬೇಡಿಕೆ ಇದೆ ಈ ಬಗ್ಗೆ ಚರ್ಚಿಸಲಾಗುವುದು ಕೇವಲ ಮಾತಿನಲಲ್ಲ ತೃತೀಯ ಮೂಲಕ ಕೊಡುಗೆ ನೀಡಲಾಗುವುದು ಎಂದರು.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯ ಪಾತ್ರ ಮಹತ್ವವಾದದ್ದು ,ಅಪೌಷ್ಟಿಕತೆ ನಿವಾರಿಸುವ ,ಪೋಷಣ ಅಭಿಯಾನ, ಇಂದ್ರಧನುಷ್ ಲಸಿಕೆಕರಣ ಮೊದಲಾದ ಕಾರ್ಯಕ್ರಮಗಳನ್ನು ಆಶಾ ಕಾರ್ಯಕರ್ತೆರಿಂದ ಯಶಸ್ವಿಯಾಗುತ್ತಿದೆ. ಕೋವಿಡ್ ಲಸಿಕಾಕರಣದಲ್ಲಿ 42,000ಕ್ಕೂ ಅಧಿಕ ಆಶಾ ಕಾರ್ಯಕರ್ತರು ಲಸಿಕೆ ನೀಡಲು ಶ್ರಮಿಸಿದ್ದರು. ಮೊದಲ ಮತ್ತು ಎರಡನೇ ಡೋಸ್ ಶೇ ೧೦೦ ರಷ್ಟು ಆಗಿದ್ದು ,ಇದರಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ತುಂಬಾ ದೊಡ್ಡದು ಎಂದರು.
0 Comments