ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ, ಕಾರಣ ನಿಗೂಢ.!

ಹರಿಹರ: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬೀದಿಕೊಂಡ ಸ್ಥಿತಿಯಲ್ಲಿ ಬಾಲಕಿಯರ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ನಗರದ ಡಾಕ್ಟರ್ ಬಿಆರ್ ಅಂಬೇಡ್ಕರ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ,ದಾವಣಗೇರಿ ತಾಲೂಕಿನ ಹೆಚ್ಚು ಬಸವಪುರ ನಿವಾಸಿ ಶಿವಣ್ಣ ಎಂಬುವರ ಪುತ್ರಿ ವರ್ಷ (೧೮) ಮೃತ ದುರ್ದೇವಿ.

ಇಬ್ಬರು ವಿದ್ಯಾರ್ಥಿನಿಯರು ಕೊಠಡಿಯಲ್ಲಿ ಕ ಸ ಓರ್ವ ವಿದ್ಯಾರ್ಥಿನಿ ಪಕ್ಕದ ಕೊಠಡಿಗೆ ಹೋದ ಸಂದರ್ಭದಲ್ಲಿ ಸರಿ ಸುಮಾರು ಮದ್ಯಾಹ್ನ 12ರ ಸಮಯದಲ್ಲಿ ಕೊಠಡಿಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವರ್ಷ ಕಂಡು ಬಂದಿದ್ದಾರೆ. ಆಗ ತಕ್ಷಣ ಹಾಸ್ಟೆಲ್ ಸಿಬ್ಬಂದಿ ಕೊಠಡಿ ಪ್ರವೇಶಿಸಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ವರ್ಷ ಇವರನ್ನು ಕೆಳಗಿಳಿಸಿ ನಗರದ ಸಾರ್ವಜನಿಕರ ಆಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ವರ್ಷ ಮೃತಪಟ್ಟಿರುವದಾಗಿ ತಿಳಿಸಿರುತ್ತಾರೆ.

ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ವೃತ ವಿದ್ಯಾರ್ಥಿನಿಯ ಪೋಷಕರು ಮಗಳ ಸಾವಿಗೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ನಿರ್ಲಕ್ಷವೇ ಕಾರಣ ಅವರನ್ನು ಕೂಡಲೇ ಅಮಾನತ್ತು ಪಡಿಸಬೇಕೆಂದು ಆಗ್ರಹಿಸಿದರು.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಏನು ಕಾರಣ ಎಂಬುದು ಪೊಲೀಸ್ ತಣಿಕೆಯಿಂದ ತಿಳಿದು ಬರಬೇಕಾಗಿದೆ.

Post a Comment

0 Comments