ಹರಿಹರ: ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಆರ್ ಧ್ರುವನಾರಾಯಣ್ ಅವರ ನಿಧನ ಹೊಂದಿದ್ದು ಇಂದು ಹರಿಹರದಲ್ಲಿ ನಡೆಯಬೇಕಾಗಿದ್ದ ಪ್ರಜಾ ಧ್ವನಿ ಯಾತ್ರೆ ಮುಂದೂಡಲಾಗಿದ್ದು ಸೋಮವಾರ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ನಡೆಯಲಿದೆ ಎಂದು ಹರಿಹರದ ಶಾಸಕರಾದ ರಾಮಪ್ಪನವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿಹರದ ಗಾಂಧಿ ಮೈದಾನದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ನಡೆಯಬೇಕಿತ್ತು. ಕಾಂಗ್ರೆಸ್ ಪಕ್ಷದ ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದ ಪ್ರಜಾ ಧ್ವನಿ ಯಾತ್ರೆಯನ್ನು ಮುಂದೂಡಲಾಗುತ್ತಿದೆ, ಸೋಮವಾರ ಕಾರ್ಯಕ್ರಮ ಹರಿಹರದಲ್ಲಿ ನಡೆಯಲಿದೆ ಅಲ್ಲದೆ ಧ್ರುವನಾರಾಯಣ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪಕ್ಷದ ಕಚೇರಿಯಲ್ಲಿ ತಾಲೂಕಿನ ಸಮಸ್ತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಧ್ರುವನಾರಾಯಣ್ ಅವರಿಗೆ ಶ್ರದ್ಧಾಂಜಲಿಯನ್ನು ಇಂದು ಸಲ್ಲಿಸಲಾಗುವುದು ಎಂದು ತಿಳಿಸಿದರು.
ಶೋಷಿತರು, ದಮನಿತರು, ದಲಿತ ಮತ್ತು ಹಿಂದುಳಿದ ವರ್ಗಗಳ ಧ್ವನಿಯಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಚಾಮರಾಜನಗರ ಕ್ಷೇತ್ರವನ್ನು ಎರಡು ಬಾರಿ ಲೋಕಸಭೆಯಲ್ಲಿ ಪ್ರತಿನಿಧಿಸಿದ್ದ ಆರ್. ಧ್ರುವನಾರಾಯಣ್ ಅವರ ನಿಧನದಿಂದ ಕರ್ನಾಟಕ ರಾಜ್ಯದ ಒಬ್ಬ ಅತ್ಯುತ್ತಮ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ನಿಧನದಿಂದ ಆಗಿರುವ ದುಃಖವನ್ನು ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ದಯಪಾಲಿಸಲಿ ದಯಾಘನನಾದ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಹರಿಹರದ ಜನಪ್ರಿಯ ಶಾಸಕರಾದ ಎಸ್. ರಾಮಪ್ಪನವರು ಧ್ರುವನಾರಾಯಣ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
KPCC ಕಾರ್ಯಾಧ್ಯಕ್ಷ `ಆರ್. ಧ್ರುವನಾರಾಯಣ' ಇನ್ನಿಲ್ಲ..!
ಮೈಸೂರಿನಲ್ಲಿ ಹೃದಯಾಘಾತದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ (61) ನಿಧನರಾಗಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.*
ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.
0 Comments