ಮಂದಾರ ನ್ಯೂಸ್, ಹರಿಹರ: 10 ಮೇ 2023 ರಂದು ಕರ್ನಾಟಕ ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಈಗಾಗಲೇ ವಿವಿಧ ಪಕ್ಷದಿಂದ ಅಭ್ಯರ್ಥಿಗಳಾಗಿ ಕಡೆ ದಿನವಾದ ನಿನ್ನೆ ನಾಮಪತ್ರವನ್ನ ಸಲ್ಲಿಸಿದ್ದಾರೆ.
ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಇಂದು ನಡೆದಿದೆ.
ಹರಿಹರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಬಿಜೆಪಿ ಕಾಂಗ್ರೆಸ್ ಮತ್ತು ಬಿ .ಎಸ್. ಪಿ . ಆಮ್ ಆದ್ಮಿ ಪಕ್ಷ ಸೇರಿದಂತೆ 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಎಲ್ಲಾ 12 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುಗೊಂಡಿರುತ್ತವೆ.
ಯಾರ್ಯಾರು ನಾಮಪತ್ರಗಳನ್ನು ಹಿಂದೆ ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಅಂತಿಮ ಕಣದಲ್ಲಿ ಅಭ್ಯರ್ಥಿಗಳ ಸ್ಪಷ್ಟವಾದ ಚಿತ್ರಿಕರಣ ಇನ್ನೆರಡು ದಿನದಲ್ಲಿ ತಿಳಿಯಲಿದೆ.
0 Comments