ಮಂದಾರ ನ್ಯೂಸ್,ಹರಿಹರ: ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಮಾಜಿ ಶಾಸಕ ಬಿ.ಪಿ ಹರೀಶ್ ಅವರು ತಾಲೂಕು ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಗರದ ನೀರಾವರಿ ಇಲಾಖೆಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಸಿದರು.
ಹರಿಹರ ವಿಧಾನಸಭಾ ಕ್ಷೇತ್ರಾದ್ಯಂತ ಎಲ್ಲಿ ನೋಡಿದರಲ್ಲಿ ಕೇಸರಿ ಬಾವುಟದ ಧ್ವಜಗಳೇ ರಾರಾಜಿಸುತ್ತಿದ್ದವು. ಬಿಸಿಲನ್ನು ಲೆಕ್ಕಿಸದೆ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಂಡರು.
ನಾಮಹ ಪತ್ರ ಸಲ್ಲಿಕೆಯ ಅದ್ದೂರಿ ಮೆರವಣಿಗೆಯಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ ಹನಗವಾಡಿ, ತಾಲೂಕು ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್, ನಗರಸಭಾ ಸದಸ್ಯ ಎಬಿಎಂ ವಿಜಿ ,ಅಶ್ವಿನಿ ಕೃಷ್ಣ, ಎ.ಕೆ ಹನುಮಂತಪ್ಪ, ಸೇರಿದಂತೆ ತಾಲೂಕು ಜಿಲ್ಲಾ ಘಟಕದ ವಿವಿಧ ಪದಾಧಿಕಾರಿಗಳು ನಾಮಪತ್ರ ಸಲ್ಲಿಕೆ ಮೆರವಣಿಗೆಯ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ತಾಲೂಕು ಚುನಾವಣೆ ಅಧಿಕಾರಿಗಳಿಗೆ ಬಿ.ಪಿ ಹರೀಶ್ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಜವಣಗಿರಿ ಜಿಲ್ಲಾ ಸಂಸದ ಜಿಎಂ ಸಿದ್ದೇಶ್ , ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಚಂದ್ರಶೇಖರ್ ಪೂಜಾರ್, ಕೊಂಡಜ್ಜಿ ರಾಘವೇಂದ್ರ, ನಾಗನಗೌಡ್ರು, ಎಸ್ ಟಿ ಯುವ ಮೋರ್ಚಾ ಅಧ್ಯಕ್ಷ ರವಿ ಟೆಲಿಕಾಂ, ಜೊತೆಯಲ್ಲಿದ್ದರೂ.
0 Comments