ಮಂದಾರ ನ್ಯೂಸ್, ಹರಿಹರ: ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಂದಿಗಾವಿ ಶ್ರೀನಿವಾಸ್ ಅವರು ಇಂದು ತಾಲೂಕ್ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರವನ್ನು ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹರಿಹರ ವಿಧಾನಸಭಾ ಕ್ಷೇತ್ರಾದ್ಯಂತ ಸಮಾಜ ಸೇವೆಯ ಮೂಲಕ ಮನೆ ಮಾತಾಗಿರುವ ನಂದಿಗಾವಿ ಶ್ರೀನಿವಾಸ್ ಇವರಿಗೆ ಹರಿಹರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಹ ಸಾಮಾನ್ಯ ಕಾರ್ಯಕರ್ತರಿಗೆ ಗುರುತಿಸಿ ಟಿಕೆಟ್ ನೀಡುತ್ತಾರೆ ಎನ್ನುವುದಕ್ಕೆ ನಂದಿಗಾವಿ ಶ್ರೀನಿವಾಸ್ ಅವರೇ ತಾಜಾ ಉದಾಹರಣೆ.
ಅದ್ದೂರಿ ಮೆರವಣಿಗೆ ಅಪಾರ ಜನಸ್ತೋಮದ ನಡುವೆ ನಂದಿಗಾವಿ ಶ್ರೀನಿವಾಸ ಅವರು ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಗರಸಭೆಯ ಎಲ್ಲಾ ಚುನಾಯಿತ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ನಂದಿಗಾವಿ ಶ್ರೀನಿವಾಸ್ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
0 Comments