ಹರಿಹರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್. ಎಸ್ ಶಿವಶಂಕರ್ ಅವರಿಂದ ಬಿರುಸಿನ ಮನೆ,ಮನೆ ಮತ ಪ್ರಚಾರ.!

ಮಂದಾರ ನ್ಯೂಸ್, ಹರಿಹರ: ಹರಿಹರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್ ಎಸ್ ಶಿವಶಂಕರ್ ಅವರಿಂದ ನಗರದ ಟಿಪ್ಪು ನಗರ ವಿಜಯನಗರ ಭಾಗದಲ್ಲಿ ಮನೆ ಮನೆಗೆ ತೆರಳಿ ಮತ ಪ್ರಚಾರವನ್ನು ಕೈಗೊಂಡರು.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಗಳನ್ನ ಮತದಾರರಿಗೆ ತಿಳಿಸುವ ನಿಟ್ಟಿನಲ್ಲಿ ಹಾಗೂ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಹರಿಹರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್ ಎಸ್ ಶಿವಶಂಕರವರಿಗೆ ತಮ್ಮ ಅತ್ಯಮೂಲ್ಯವಾದ ಮತವನ್ನ ನೀಡುವಂತೆ ಎಚ್ಎಸ್ ಶಿವಶಂಕರ್ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.

ನಗರದ ಅಭಿವೃದ್ಧಿಯ ದೃಷ್ಟಿಯಿಂದ ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಕೈಜೋಡಿಸುವಂತೆ ಮತದಾರ ಪ್ರಭುಗಳಿಗೆ ಕರೆ ನೀಡಿದರು.

ಈಗಾಗಲೇ ಹರಿಹರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್ ಎಸ್ ಶಿವಶಂಕರ್ ಅವರು ಹರಿಹರ ವಿಧಾನಸಭಾ ಕ್ಷೇತ್ರದ ಮೂರು ಸುತ್ತಿನ ಮನೆಮನೆ ಮತ ಪ್ರಚಾರವನ್ನು ಮುಗಿಸಿ ನಾಲ್ಕನೇ ಸುತ್ತಿನ ಮತ ಪ್ರಚಾರವನ್ನು ಕೈಗೊಂಡಿದ್ದಾರೆ.
ಎಚ್.ಎಸ್ ಶಿವಶಂಕರ್ ಅವರ ನಾಯಕತ್ವವನ್ನು ಒಪ್ಪಿ ವಿವಿಧ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನ ಸೇರ್ಪಡೆಗೊಳ್ಳುತ್ತಿದ್ದಾರೆ. ಜೆಡಿಎಸ್ ಪಕ್ಷವನ್ನ ಅಪ್ಪಿಕೊಳ್ಳುವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್ ಎಸ್ ಶಿವಶಂಕರ್ ಅವರು ಅತ್ಯಧಿಕ ಮತದಿಂದ ಜಯಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕ್ಷೇತ್ರದ ಮತದಾರರು ಮಾತನಾಡಿಕೊಳ್ಳುತ್ತಿದ್ದಾರೆ.

Post a Comment

0 Comments