ಮಂದಾರ ನ್ಯೂಸ್, ಹರಿಹರ: ಹರಿಹರ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹರಿಹರದ ಹಾಲಿ ಶಾಸಕ ಎಸ್ ರಾಮಪ್ಪನವರು ಟಿಕೆಟ್ ಸಿಗದ ಕಾರಣ ಕೆಲವು ದಿನಗಳಿಂದ ತಟಸ್ಥರಾಗಿದ್ದರು.
ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದಿಗಾವಿ ಶ್ರೀನಿವಾಸ್ ಬಿ ಫಾರಂ ಪಡೆದು ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಶಾಸಕ ಎಸ್ ರಾಮಪ್ಪನವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ.
ಹರಿಹರ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ "ರಾಮಪ್ಪನವರ ನಡೆ ,ಯಾವ ಕಡೆ" ಇರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದರು.
ಎಲ್ಲರ ಕುತೂಹಲಕ್ಕೆ ತೆರೆ ಎಳೆಯುವ ಉದ್ದೇಶದಿಂದ ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ರಾಮಪ್ಪನವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಾಸಕರು ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಂದಿಗಾವಿ ಶ್ರೀನಿವಾಸ್ ಅವರಿಗೆ ಸಂಪೂರ್ಣ ಬೆಂಬಲವನ್ನ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಭರವಸೆ ನೀಡಿದರು. ನಾಳೆಯಿಂದಲೇ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುವುದಾಗಿ ತಿಳಿಸಿದರು.
ಈ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಹರಿಹರದ ಶಾಸಕ ರಾಮಪ್ಪ,ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಂದಿಗಾವಿ ಶ್ರೀನಿವಾಸ್, ಕೆಪಿಸಿಸಿ ವಕ್ತಾರ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರದ ಎಂ. ನಾಗೇಂದ್ರಪ್ಪ ರಾಜನಹಳ್ಳಿ, ಕೆಪಿಸಿಸಿ ವಕ್ತಾರ ರೇವಣಸಿದ್ದಪ್ಪ, ನಗರಸಭೆ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸದಸ್ಯ ಶಂಕರ್ ಖಟವ್ಕರ್, ಕೃಷ್ಣ ಶಾ ಭೂತೆ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ,ಕಾರ್ಯಕರ್ತರು, ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
0 Comments