ಚೇತನ್ ರಾಜ್ ಕಣ್ಣೂರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ. ನಾಳೆ ಕಾಂಗ್ರೆಸ್ ಸೇರ್ಪಡೆ.!?



ಮಂದಾರ ನ್ಯೂಸ್ ಸಾಗರ: ಸಾಗರ ವಿಧಾನಸಭಾ ಕ್ಷೇತ್ರದ ಆನಂದಪುರ ಭಾಗದ ಪ್ರಭಾವಿ ರಾಜಕಾರಣಿ ಮಾಗಿ ಎಪಿಎಂಸಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರ್ ಬಿಜೆಪಿ ಪ್ರಾರ್ಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಇಂದು ನೀಡಿದ್ದಾರೆ. ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಅವರ ಅಭಿಮಾನಿಗಳು ನಮ್ಮ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ಚೇತನ್ ರಾಜ್ ಕಣ್ಣೂರ್ ಅವರು ಆನಂದಪುರ ಹೋಬಳಿ ಭಾಗದಲ್ಲಿ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿದ್ದು ತಮ್ಮದೇಯಾದ ಮತ ಬ್ಯಾಂಕ್ ಹೊಂದಿದ್ದಾರೆ. ಚೇತನ್ ರಾಜ್ ಕಣ್ಣೂರ್ ಅವರೊಟ್ಟಿಗೆ ಸರಿಸುಮಾರು 150ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಚೇತನ್ ರಾಜ್ ಕಣ್ಣೂರ್ ಅವರು ಬಿಜೆಪಿ ಪಕ್ಷದಿಂದ ಹೊರ ಬಂದಿರುವ ಕಾರಣ ಮುಂದೆ ಫಲಿತಾಂಶದಲ್ಲಿ ಭಾರಿ ಏರುಪೇರು ಆಗುವ ಸಾಧ್ಯತೆಗಳು ಹೆಚ್ಚಳವಾಗಿದೆ. ಈಗಾಗಲೇ ಬೇಳೂರು ಗೋಪಾಲಕೃಷ್ಣ ಅವರ ನಾಯಕತ್ವವನ್ನು ಒಪ್ಪಿ ಸಾಗರ ವಿಧಾನಸಭಾ ಕ್ಷೇತ್ರಾದ್ಯಂತ ಹಲವು ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ.

ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದ ಸಂದರ್ಭದಲ್ಲಿ ನಿರೀಕ್ಷೆಗೂ ಮೀರಿ ಜನ ಸೇರಿದ್ದು ಯಾರೂ ಊಹೆ ಮಾಡಲು ಸಾಧ್ಯವಾಗಿರಲಿಲ್ಲ. ಈಗಾಗಲೇ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

Post a Comment

0 Comments