ಮಂದಾರ ನ್ಯೂಸ್,ಸಾಗರ: ಸಿದ್ದರಾಮಯ್ಯನವರ
ನೇತೃತ್ವದ ಕಾಂಗ್ರೆಸ್ ಪಕ್ಷದ ಮಂತ್ರಿ ಮಂಡಲದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಾಗಿದೆ.
ಸಾಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪನವರ ವಿರುದ್ಧ 16೦22 ಮತಗಳ ಅಂತರದಿಂದ ಜಯಗಳಿಸಿರುತ್ತಾರೆ.
ಬೇಳೂರು ಗೋಪಾಲಕೃಷ್ಣ ಈಡಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ಅನುಭವಿ ರಾಜಕಾರಣಿ ಆಗಿರುತ್ತಾರೆ. ಈ ಹಿಂದೆ ಎರಡು ಬಾರಿ ಶಾಸಕರಾಗಿ ಆಯ್ಕೆಯಾದ ಅನುಭವವಿದೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿರುವ ಬೇಳೂರು ಗೋಪಾಲಕೃಷ್ಣ ಅವರಿಗೆ ಸಿದ್ದರಾಮಯ್ಯನವರ ನೇತೃತ್ವದ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಸಿಗುವುದು ನಿಶ್ಚಿತವಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಆಪ್ತರು ಹಾಗೂ ಮಾಜಿ ತಾಲೂಕ ಪಂಚಾಯತ್ ಸದಸ್ಯ ಸೋಮಶೇಖರ್ ಲಾವಿಗ್ಗೆರಿ ಅವರು ನಮ್ಮ ಮಾಧ್ಯಮದೊಂದಿಗೆ ಮಾಹಿತಿಯನ್ನು ಹಂಚಿಕೊಂಡರು.
ಜಿಲ್ಲಾವಾರು, ಜಾತಿವಾರು ಮತ್ತು ಅನುಭವದ ಲೆಕ್ಕಾಚಾರದಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಗ್ಯಾರಂಟಿ ಎನ್ನುತ್ತಾರೆ ಸೋಮಶೇಖರ್ ಲಾವಿಗ್ಗೆರಿ.
ಈಗಾಗಲೇ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನು ಸಹ ನೀಡಲಾಗಿದೆ. ಇದರ ಜೊತೆಗೆ ಇಂದಿರಾ ಕ್ಯಾಂಟೀನ್ ಅನ್ನು ಮತ್ತೆ ಪುನರಾರಂಭ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನುಡಿದಂತೆ ನಡೆಯುವ ಸರ್ಕಾರವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಉತ್ತಮ ಜನಪರ ಆಡಳಿತವನ್ನು ನೀಡುತ್ತಾರೆ ಎಂದು ಹೇಳಿದರು.
ಸಾಗರ ತಾಲೂಕನ್ನು ರಾಜ್ಯದಲ್ಲೇ ಮಾದರಿ ತಾಲೂಕನ್ನಾಗಿ ಮಾಡುವ ಯೋಚನೆಯನ್ನು ಹೊಂದಿದ್ದು ಬೇಳೂರವರು ಸಾಗರಕ್ಕೆ ಆಗಮಿಸುತ್ತಿದ್ದಂತೆ ಪಕ್ಷದ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಉಪಸ್ಥಿತಿಯಲ್ಲಿ, ಪಕ್ಷದ ಎಲ್ಲಾ ಹಿರಿಯ- ಕಿರಿಯ ಮುಖಂಡರ ಸಮ್ಮುಖದಲ್ಲಿ ಮತ್ತು ತಾಲೂಕಿನ ಪ್ರಜ್ಞಾವಂತ ನಾಗರಿಕರ ಮಾರ್ಗದರ್ಶನದಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಶಾಸಕರ ಹೆಸರನ್ನು ಹೇಳಿಕೊಂಡು ಯಾರಾದರೂ ಅಧಿಕಾರಿಗಳಿಗಾಗಲಿ ಅಥವಾ ಇತರೆ ಇಲಾಖೆಗಳಿಗಾಗಲಿ ಮತ್ತು ಜನಸಾಮಾನ್ಯರಿಗೆ ದಾರಿ ತಪ್ಪಿಸುವಂತ ಕೆಲಸ ಮಾಡಿದರೆ ಕೂಡಲೇ ಶಾಸಕರ ಗಮನಕ್ಕೆ ತರಬೇಕೆಂದು ತಾಲೂಕಿನ ಜನರಲ್ಲಿ ಸೋಮಶೇಖರ್ ಲಾವಿಗ್ಗೆರಿ ಅವರು ಮನವಿ ಮಾಡಿಕೊಂಡರು.
0 Comments