ನಂದಿಗಾವಿ ಶ್ರೀನಿವಾಸ್ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಸಿಗುವ ಸಾಧ್ಯತೆ.!?



ಮಂದಾರ ನ್ಯೂಸ್, ಹರಿಹರ: ಹರಿಹರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ವಿರುದ್ಧ ಅಲ್ಪಮತದ ಹಿನ್ನಡೆಯನ್ನು ಅನುಭವಿಸಿ ಸೋಲನ್ನು ಕಂಡಿರುವ ನಂದಿಗಾವಿ ಶ್ರೀನಿವಾಸ್ ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಳವಾಗಿದೆ.

ಈಗಾಗಲೇ ನಂದಿಗಾವಿ ಶ್ರೀನಿವಾಸ್ ರವರು ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿರುವುದನ್ನು ಗಮನಿಸಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಲಿಖಿತ ರೂಪದ ಪತ್ರ ಮುಖೇನ ಅಭಿನಂದನೆ ಸಲ್ಲಿಸಿದ್ದು ,ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಡಿಕೆ ಶಿವಕುಮಾರ್ ಅವರು ನಂದಿಗಾವಿ ಶ್ರೀನಿವಾಸ್ ಅವರಿಗೆ ಸೂಚಿಸಿದ್ದಾರೆ.
ಈಗಾಗಲೇ ನಂದಿಗಾವಿ ಶ್ರೀನಿವಾಸ್ ಅವರು ಹರಿಹರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾಗಿದ್ದು ಕೇಂದ್ರ ಹೈಕಮಾಂಡ್ ಇವರ ಗಮನವನ್ನು ಸೆಳೆದಿರುತ್ತಾರೆ.ಕೇಂದ್ರದ ನಾಯಕರದ ರಾಹುಲ್ ಗಾಂಧಿ ಅವರೊಂದಿಗೆ ಉತ್ತಮವಾದ ಬಾಂಧವ್ಯವನ್ನು ಇಟ್ಟುಕೊಂಡಿರುವ ನಂದಿಗಾವಿ ಶ್ರೀನಿವಾಸ್ ಮುಂದಿನ ದಿನದಲ್ಲಿ ರಾಜ್ಯ ಸರ್ಕಾರದ ಯಾವುದಾದರೂ ನಿಗಮ ಮಂಡಳಿಯ ಅಧ್ಯಕ್ಷರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಒಟ್ಟಾರೆಯಾಗಿ ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಸರ್ಕಾರಿ ಗೂಟದ ವಾಹನ ಸಿಗುವುದು ನಿಶ್ಚಿತ.

ನಂದಿಗಾವಿ ಶ್ರೀನಿವಾಸ್ ಸೋಲಿನ ಬಗ್ಗೆ ತಲೆ ಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಕೊಂಡಿದ್ದು, ರಾಜ್ಯ ನಾಯಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತಿದ್ದಾರೆ.

Post a Comment

0 Comments