ತಪೋವನ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಮಂದಾರ ನ್ಯೂಸ್,ದಾವಣಗೆರೆ: ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ದಾವಣಗೆರೆ. ತಪೋವನ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ದಾವಣಗೆರೆ. ತಪೋವನ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ದಾವಣಗೆರೆ. ಇವರುಗಳ ಸಂಯುಕ್ತ ಆಶ್ರಯದಲ್ಲಿ ಒಂಬತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು 21.6. 2023 ಬುಧವಾರ ತಪೋವನ, ದೊಡ್ಡಬಾತಿಯಲ್ಲಿ ಬೆಳಿಗ್ಗೆ 6:00ಗೆ ನಡೆಯಲಿದೆ.

ಕಾರ್ಯಕ್ರಮದ  ಅಧ್ಯಕ್ಷತೆಯನ್ನು ತಪೋವನ ಸಮೂಹ ಸಂಸ್ಥೆಗಳ ನಿರ್ದೇಶಕರಾದ  ಡಾ. ಶಶಿಕುಮಾರ್ ವಿ ಮೆಹರ್ವಾಡೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸೊರಬ ತಾಲೂಕು ಹರೀಶಿ ಯೋಗ ಮತ್ತು ರೇಖಿ ಚಿಕಿತ್ಸಕರಾದ ಶ್ರೀ ವಿಶ್ವನಾಥ್ ಹರೀಶಿ, ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಚ್.ಎಸ್ ಶಿವಶಂಕರ್, ಕಾಂಗ್ರೆಸ್ ಮುಖಂಡರು ಹಾಗೂ ಸಮಾಜಸೇವಕರಾದ ಶ್ರೀ ನಂದಿಗಾವಿ ಶ್ರೀನಿವಾಸ್, ದೊಡ್ಡಬಾತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ ಜಿ ಉಮೇಶ್, ಮಂದಾರ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯರಾದ ಶ್ರೀ ಪರಶುರಾಮ , ಡಿ ಆರ್ ಎಂ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರಾದ ಶ್ರೀ ರಾಜಶೇಖರ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾದ ಶ್ರೀ ಆರ್ ಶ್ರೀನಿವಾಸ್, ಐ ಟಿ ಐ ಕಾಲೇಜು ಪ್ರಾಂಶುಪಾಲರಾದ ಶ್ರೀ ಜಯಪ್ಪ, ಮೌಲಾನ್ ಆಜಾದ್ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಶ್ರೀ ರಾಜಶೇಖರ್ ಪಟೇಲ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಂಚಾಲಕರಾದ ಗೌರಕ್ಕ, ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
"ವಿಶ್ವ ಕುಟುಂಬಕ್ಕಾಗಿ ಯೋಗ" ಎಂಬ ಧ್ಯೇಯ ವಾಕ್ಯದೊಂದಿಗೆ ಕಳೆದ 9 ವರ್ಷದಿಂದ ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ತಪೋವನ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಶಶಿಕುಮಾರ್.ವಿ ಮೆಹರ್ವಾಡೆ ಇವರು ನಡೆಸಿಕೊಂಡು ಬರುತ್ತಿದ್ದಾರೆ.

ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಯೋಗ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜು ಆಡಳಿತ ಮಂಡಳಿಯವರು ನಮ್ಮ ಮಾಧ್ಯಮದೊಂದಿಗೆ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಹಂಚಿಕೊಂಡರು.

Post a Comment

0 Comments