ಮಂದಾರ ನ್ಯೂಸ್ ,ಸಾಗರ: ಮುಂದೆ ಬರಲಿರುವ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೊಸೂರು ತಾಲೂಕ್ ಪಂಚಾಯತ್ ಕ್ಷೇತ್ರದಿಂದ ಹಿರೇಬಿಲಗುಂಜಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಯೋಗೇಶ್ ಹುತ್ತದಿಂಬ ಇವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ವ್ಯಕ್ತಪಡಿಸಿದ್ದಾರೆ.
ಹಿರೇಬಿಲಗುಂಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪಂಚಾಯತಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅವರು ಇದೀಗ ತಾಲ್ಲೂಕು ಪಂಚಾಯತ್ ಅಭ್ಯರ್ಥಿಯಾಗಿ ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರ ಗೆಲುವಿನಲ್ಲಿ ಯೋಗೇಶ್ಹುತದಿಂದ ಅವರು ಪ್ರಮುಖವಾದ ಪಾತ್ರವನ್ನು ವಹಿಸಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಿದ್ದಾರೆ. ಮುಂದೆ ಬರ್ತಕಂತ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಯೋಗೇಶ್ ಹುತ್ತದಿಂಬ ಇವರು ಹೊಸೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಟಿಕೆಟ್ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.
0 Comments