ಎಲ್ಲರೂ ಪರಿಸರದ ಬಗ್ಗೆ ಕಾಳಜಿ ಹೊಂದಬೇಕು: ಗಣಪತಿ ಮಾಳಂಜಿ.

ಮಂದಾರ ನ್ಯೂಸ್ ,ಹರಿಹರ: ಪರಿಸರದಲ್ಲಿ ಸಮತೋಲನವನ್ನು ಕಾಪಾಡಿಕೊಂಡು ಹೋಗುವ ಸದ್ದುದ್ದೇಶದಿಂದ ಎಲ್ಲರೂ ಪರಿಸರದ ಬಗ್ಗೆ ಕಾಳಜಿಯನ್ನ ಹೊಂದಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಅಧಿಕಾರಿ ಶ್ರೀ ಗಣಪತಿ ಮಾಳಂಜಿ ಅವರು ಹೇಳಿದರು.
ಹರಿಹರ ತಾಲೂಕು ರಾಜನಹಳ್ಳಿ ವಲಯದ ರಾಜನಹಳ್ಳಿ ಗ್ರಾಮದ ಸಿದ್ಧಾರೂಢ ಮಠದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರು ತಮ್ಮ ಮನೆಯ ಮುಂದೆ ಒಂದೊಂದು ಗಿಡವನ್ನು ನೆಡುವ ಮೂಲಕ ಪರಿಸರದ ಬಗ್ಗೆ ತಮ್ಮ ಮಕ್ಕಳಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು. ಮಕ್ಕಳಿಗೆ ಶಿಕ್ಷಣದ ಜೊತೆ ಪರಿಸರ ರಕ್ಷಣೆಯ ಪಾಠವನ್ನು ಕಲಿಸಬೇಕು. ಇಂದು ಮಾನವನ ದುರಾಸೆಯ ಫಲವಾಗಿ ಪ್ರಕೃತಿ ಅವನತಿಯ ಅತ್ತ ಸಾಗುತ್ತಿದೆ. ಸಕಾಲಕ್ಕೆ ಮಳೆಯಾಗುತ್ತಿಲ್ಲ . ನಮ್ಮ ಮುಂದಿನ ಪೀಳಿಗೆ ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಬದುಕುವ ಪರಿಸ್ಥಿತಿ ಬರಬಹುದು. ಹಾಗಾಗಿ ಮುಂದಿನ ಪೀಳಿಗೆಯ ದೃಷ್ಟಿಯಿಂದ ನಾವು ಹೆಚ್ಚು ,ಹೆಚ್ಚು ಗಿಡಮರಗಳನ್ನು ಬೆಳೆಸೋಣ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಜನರಿಗೆ ಪರಿಸರದ ಬಗ್ಗೆ ಯೋಗ್ಯನಾಧಿಕಾರಿಗಳು ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ಸಿದ್ದಾರೂಡ ಮಠದ ಆವರಣದಲ್ಲಿ ಗಿಡವನ್ನು ನೆಟ್ಟು, ನೀರು ಎರೆಯುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಚರಿಸಿದರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮೇಲ್ವಿಚಾರಕರಾದ ಪ್ರಸನ್ನ, ಸಮನ್ವಯ ಅಧಿಕಾರಿ ಭಾರತಿ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಮತ್ತು ಸೇವಾ ಪ್ರತಿನಿಧಿಗಳು ಊರಿನ ನಾಗರಿಕರು ಉಪಸ್ಥಿತರಿದ್ದರು.

Post a Comment

0 Comments