ಮಂದಾರ ನ್ಯೂಸ್,ಹರಿಹರ: ಹರಿಹರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಎಲ್ಲರ ಆಶ್ಚರ್ಯಕ್ಕೆ ಕಾರಣರಾದ ನಂದಿಗಾವಿ ಶ್ರೀನಿವಾಸ್ ಚುನಾವಣೆಯಲ್ಲಿ ಅತ್ಯಲ್ಪ ಮತಗಳ ಅಂತರದಿಂದ ಸೋಲನ್ನು ಕಾಣಬೇಕಾಯಿತು.
ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರವನ್ನು ನಡೆಸುತ್ತಿದೆ. ಒಂದು ವೇಳೆ ನಂದಿಗಾವಿ ಶ್ರೀನಿವಾಸ್ ಗೆಲುವು ಕಂಡಿದ್ದರೆ ಹರಿಹರಕ್ಕೆ ಅಭಿವೃದ್ಧಿಯ ಮಹಾಪೂರವೇ ಹರಿದು ಬರುತ್ತಿತ್ತು. ಹಿಂದೆಂದೂ ಕಾಣದಷ್ಟು ರೀತಿಯಲ್ಲಿ ಅಭಿವೃದ್ಧಿ ಕಾಣುತ್ತಿತ್ತು. ಆದರೆ ಅದೃಷ್ಟ ನಂದಿಗಾವಿ ಶ್ರೀನಿವಾಸ್ ಅವರ ಕೈಹಿಡಿಯಲಿಲ್ಲ.
ನಂದಿಗಾವಿ ಶ್ರೀನಿವಾಸ್ ಚುನಾವಣೆಯಲ್ಲಿ ಸೋಲು ಕಂಡರೂ ಸುಮ್ಮನೆ ಕುಳಿತುಕೊಳ್ಳದೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲಿಗೆ ಚಕ್ರವನ್ನ ಕಟ್ಟಿಕೊಂಡವರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮಂತ್ರಿಮಂಡಲದ ಸಚಿವರನ್ನ ಮೇಲಿಂದ ಮೇಲೆ ಭೇಟಿಯಾಗುವ ಮೂಲಕ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.
ಈಗಾಗಲೇ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ನಂದಿಗಾವಿ ಶ್ರೀನಿವಾಸ್ ಅವರ ಅಮೋಘ ಸೇವೆಯನ್ನ ಗುರುತಿಸಿ ಅವರಿಗೆ ಹರಿಹರ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ "ಸುಪ್ರೀಂ ಪವರ್" ನೀಡಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ.
ಕ್ಷೇತ್ರದ ಅಭಿವೃದ್ಧಿಗಾಗಿ ನಂದಿಗಾವಿ ಶ್ರೀನಿವಾಸ್ ರವರು ರಾಜ್ಯ ನಾಯಕರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದು, ನಂದಿಗಾವಿ ಶ್ರೀನಿವಾಸ್ ಅವರ ಎಲ್ಲಾ ಮನವಿಗಳಿಗೂ ಸಕಾರಾತ್ಮಕವಾಗಿ ರಾಜ್ಯ ನಾಯಕರು ಸ್ಪಂದಿಸುತ್ತಿದ್ದಾರೆ.
ನಂದಿಗಾವಿ ಶ್ರೀನಿವಾಸ್ ಅವರು ರಾಜ್ಯ ನಾಯಕರ ಬಳಿ ಯಾವುದೇ ಸಮಸ್ಯೆಗಳನ್ನು ಹೇಳಿಕೊಂಡು ಹೋದರೆ ಕೂಡಲೇ ರಾಜ್ಯ ನಾಯಕರು ಸ್ಪಂದಿಸುವ ಜೊತೆಗೆ ಅವರಿಗೆ ಉತ್ತಮ ರೀತಿಯ ಭರವಸೆಗಳನ್ನ ನೀಡುತ್ತಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗಾಗಿ ನಂದಿಗಾವಿ ಶ್ರೀನಿವಾಸ್ ಅವರಿಗೆ ಹೆಚ್ಚಿನ ಜವಾಬ್ದಾರಿಯನ್ನ ನೀಡುವ ಸಾಧ್ಯತೆ ಹೆಚ್ಚಾಗಿದೆ. ಅಷ್ಟೇ ಅಲ್ಲದೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ ನಂದಿಗಾವಿ ಶ್ರೀನಿವಾಸ್ ಅವರಿಗೆ ಯಾವುದಾದರೂ ನಿಗಮ ಮಂಡಳಿಯಲ್ಲಿ ಸ್ಥಾನ ಸಿಗುವ ಸಾಧ್ಯತೆಯೊ ಹೆಚ್ಚಾಗಿದೆ.
ಈಗಾಗಲೇ ನಂದಿಗಾವಿ ಶ್ರೀನಿವಾಸ್ ಅವರು ತಾಲೂಕಿನ ಆಡಳಿತ ಯಂತ್ರವನ್ನು ಸುಧಾರಿಸುವ ನಿಟ್ಟಿನಲ್ಲಿ ತಮ್ಮದೇ ಪಕ್ಷದ ನಾಯಕ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಸಂಬಂಧಿಸಿದ ಇಲಾಖೆಗಳಿಗೆ ಸರ್ಜರಿ ನಡೆಸುವ ಸಾಧ್ಯತೆ ಇದೆ.ಮುಂದಿನ ದಿನದಲ್ಲಿ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಒಂದು ಮಾಹಿತಿಯ ಪ್ರಕಾರ ತಾಲೂಕು ಕಂದಾಯ ಇಲಾಖೆ, ತಾಲೂಕ್ ಪಂಚಾಯತ್, ನಗರ ಸಭೆ ಹಾಗೂ ಡಿಪೋ ಮ್ಯಾನೇಜರ್ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳನ್ನು ತಾಲೂಕಿನಿಂದ ವರ್ಗಾವಣೆ ಮಾಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಚಿವರನ್ನು ಮೇಲಿಂದ ಮೇಲೆ ಭೇಟಿಯಾಗುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ತಾಲೂಕು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಆಗುವ ಸಾಧ್ಯತೆ ಹೆಚ್ಚಾಗಿದೆ.
ಈಗಾಗಲೇ ನಂದಿಗಾವಿ ಶ್ರೀನಿವಾಸ್ ಹರಿಹರ ಕ್ಷೇತ್ರವನ್ನು ಪಕ್ಷದ ರಾಜ್ಯ ನಾಯಕರು ನೀಡಿರುವ " ಸುಪ್ರೀಂ ಪವರ್" ನಿಂದ ಆಡಳಿತ ನಡೆಸುತ್ತಿದ್ದಾರೆ ಎಂಬ ಮಾತು ಸಾರ್ವಜನಿಕರ ವಲಯದಿಂದ ಕೇಳಿ ಬರುತ್ತಿದೆ.
0 Comments