ಮಂದಾರ ನ್ಯೂಸ್, ದಾವಣಗೆರೆ; ಜುಲೈ. 26 (ಕರ್ನಾಟಕ ವಾರ್ತೆ) : 2023-24 ನೇ ಸಾಲಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯಡಿ ಜಿಲ್ಲೆಯ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ 2000 ಗಳನ್ನು ಡಿ.ಬಿ.ಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಜಿಲ್ಲೆಯಲ್ಲಿ ಅಂದಾಜು 4,50,000 ಫಲಾನುಭವಿಗಳಿದ್ದು, ಸುಮಾರು 1,10,000 ಫಲಾನುಭವಿಗಳ ನೊಂದಣಿ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಫಲಾನುಭವಿಗಳ ಅರ್ಜಿಗಳನ್ನು ಇನ್ನು ಒಂದು ವಾರದೊಳಗೆ ನೊಂದಣಿ ಮಾಡಲಾಗುತ್ತದೆ.
ಜಿಲ್ಲೆಯಾದ್ಯಂತ ಒಟ್ಟು 411 ನೊಂದಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅರ್ಜಿ ಸಲ್ಲಿಸಲು ಯಾವುದೇ ಕಾಲ ಮಿತಿಯಿರುವುದಿಲ್ಲ ಹಾಗೂ ನೊಂದಣಿಗೆ ಶುಲ್ಕ ಪಾವತಿಸುವಂತಿಲ್ಲ. ಯಾವುದೇ ಕೇಂದ್ರಗಳಲ್ಲಿ ನೊಂದಾಯಿಸಲು ಹಣ ಕೇಳಿದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಪೋಲೀಸ್ ಠಾಣೆ ಅಥವಾ ತಹಶೀಲ್ದಾರರ ಕಚೇರಿ ಸಂಪರ್ಕಿಸಿ ದೂರು ಸಲ್ಲಿಸಲು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*********
0 Comments