ಮಂದಾರ ನ್ಯೂಸ್, ಹರಿಹರ: ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪರ ಪ್ರಮಾಣದ ನಷ್ಟ ಉಂಟಾಗಿದೆ.
ಈಗಾಗಲೇ ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರಾದ ನಂದಿಗಾವಿ ಶ್ರೀನಿವಾಸ್ ರವರು ತಮ್ಮ ವಿಧಾನಸಭಾ ಕ್ಷೇತ್ರದ ಮಳೆ ಹಾನಿ ಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಸಾಂತ್ವಾನ ಹೇಳುವುದರ ಜೊತೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತುರ್ತು ಪರಿಹಾರ ಒದಗಿಸುವಂತೆ ಸೂಚನೆ ನೀಡಿದ್ದಾರೆ.
ಇಂದು ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಸುರಿಯುತ್ತಿರುವ ಧಾರಾಕಾರ ಮಳೆಯ ಪ್ರಭಾವದ ಕಾರಣ ಗ್ರಾಮದ ಶ್ರೀ ಕೊಣನತಲೆ ಗಿರಿಯಪ್ಪ ಹಾಗೂ ನಾಗರಾಜಪ್ಪ ಇವರ ಮನೆ ಗೋಡೆ ಕುಸಿದಿದ್ದು ಸ್ಥಳಕ್ಕೆ ಆಗಮಿಸಿ ಸಾಂತ್ವನ ಹೇಳುವುದರ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಶೀಘ್ರ ಪರಿಹಾರ ಬಗ್ಗೆ ಚರ್ಚಿಸಲಾಯಿತು.
0 Comments