ಆಟೋ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ನಗರಸಭೆಯ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಗೌರವ ಸನ್ಮಾನ.!



ಮಂದಾರ ನ್ಯೂಸ್ ,ಹರಿಹರ: ಇತ್ತೀಚಿಗೆ ಹರಿಹರ ನಗರಸಭೆಯ ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ನಿಂಬಕ್ಕ ನಿಂಗಪ್ಪ ಚಂದಾಪುರ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದ ಕೆ.ಜಿ ಸಿದ್ದೇಶ್ ಇವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಇಂದು ಹರಿಹರ ನಗರದ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ನಗರಸಭೆಯ ನೂತನ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಗೌರವಿಸಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಆಟೋ ಮಾಲೀಕರು ಹಾಗೂ ಚಾಲಕರು ನಗರದ ಪ್ರಮುಖ ರಸ್ತೆಗಳು ಸೇರಿದಂತೆ ಕೆಲವು ವಾರ್ಡ್ಗಳಲ್ಲಿ ರಸ್ತೆ ಮಧ್ಯೆ ವಿಪರೀತವಾದ ಗುಂಡಿಗಳು ಬಿದ್ದಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ನಗರಸಭೆಯ ಚುನಾಯಿತ ಸದಸ್ಯರಲ್ಲಿ ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ನಗರಸಭೆಯ ನಗರಸಭೆಯ ಚುನಾಯಿತ ಸದಸ್ಯರನ್ನು ಸಹ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹರಿಹರ ನಗರದ ಆಟೋ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷರು, ಗೌರವಾಧ್ಯಕ್ಷರು ,ಉಪಾಧ್ಯಕ್ಷರು ,ಪ್ರಧಾನ ಕಾರ್ಯದರ್ಶಿಗಳು, ಖಜಾಂಚಿ ಸೇರಿದಂತೆ ಸಂಘದ ವಿವಿಧ ಸ್ಥಾನವನ್ನ ಅಲಂಕರಿಸಿದ ಪದಾಧಿಕಾರಿಗಳು ಹಾಗೂ ಆಟೋ ಮಾಲೀಕರು ಹಾಗೂ ಚಾಲಕರು ಉಪಸ್ಥಿತರಿದ್ದರು.

ವರದಿ. ತಿಪ್ಪೇಶ್. ಎಲ್

Post a Comment

0 Comments