ರಾತ್ರಿ ಮಲಗಿದ್ದ ಸಮಯದಲ್ಲಿ ಮನೆಯ ಗೋಡೆ ಕುಸಿದು ಮೃತಪಟ್ಟ ಒಂದು ವರ್ಷದ ಮಗು.!!


ಮಂದಾರ ನ್ಯೂಸ್, ಹರಿಹರ: ತಾಲೂಕಿನಲ್ಲಿ ನಿರಂತರ ಸುರಿಯುತ್ತಿರುವ ಕುಂಭದ್ರೋಣ ಮಳೆ ಪರಿಣಾಮ, ಮನೆ ಗೋಡೆ ಕುಸಿದು ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಮಲೇಬೆನ್ನೂರು ಹೋಬಳಿ ಕುಂಬಳೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ತಂದೆಗೆ ಗಾಯವಾಗಿದ್ದು, ಜಿಲ್ಲಾ ಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪೂರ್ತಿ(01) ಸಾವನ್ನಪ್ಪಿದ ದುರ್ದೈವಿ ಹೆಣ್ಣು ಮಗು. ಕೆಂಚಪ್ಪ (32) ಗಾಯಗೊಂಡ ತಂದೆ. ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಮಳೆಗೆ ಸಂಪೂರ್ಣವಾಗಿ ಶಿಥಿಲಗೊಂಡಿದ್ದ ಮನೆ ಕುಸಿದಿದೆ. 

ರಾತ್ರಿ ವೇಳೆ ಕೆಂಚಪ್ಪ ಮಗು ಸ್ಪೂರ್ತಿ ಹಾಗೂ‌ ಪತ್ನಿ ಲಕ್ಷ್ಮಿ ಮಲಗಿದ್ದ ಸಂದರ್ಭದಲ್ಲಿ ಮನೆಯ ಗೋಡೆ ಖುಷಿದು ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.ಮಲೇಬೆನ್ನೂರು‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರದಿ. ತಿಪ್ಪೇಶ್. ಎಲ್ 

Post a Comment

0 Comments