ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ:ಮುಖ್ಯಮಂತ್ರಿ ಸಿದ್ದರಾಮಯ್ಯ.


ಬೆಂಗಳೂರು, ಜುಲೈ 25: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕುವ ಸಂದರ್ಭದಲ್ಲಿ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ  ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


*ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಸಚಿವರ ತಂಡದ ಭೇಟಿ*
ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ  ಜೂನ್ ತಿಂಗಳಲ್ಲಿ  ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು. 

ಹಾವೇರಿಯಲ್ಲಿ ರೈತರು ಮರಣಹೊಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುತ್ತಿದ್ದು, ಮಳೆ ಹೆಚ್ಚಾಗಿ ಬಿದ್ದಿರುವ ಕಡೆ ತಂಡಗಳನ್ನು ಮಾಡಿಕೊಂಡು ಭೇಟಿ ನೀಡಲಾಗುವುದು. ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಇಂದು ಸಚಿವ ಕೃಷ್ಣ ಬೈರೇಗೌಡ ಅವರು  ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.

Post a Comment

0 Comments