ಪೋಲಿಸ್ ಇಲಾಖೆಗೆ ಮೇಜರ್ ಸರ್ಜರಿ. ರಾಜ್ಯದ 211 ಪೋಲಿಸ್ ಇನ್ ಸ್ಪೆಕ್ಟರ್ ವರ್ಗಾವಣೆ, ರಾಣೆಬೆನ್ನೂರು ಗ್ರಾಮಾಂತರ ಠಾಣಾಧಿಕಾರಿಯಾಗಿ "ಡೈನಮಿಕ್ ಪೊಲೀಸ್" ಪ್ರವೀಣ್ ಕುಮಾರ್.ವಿ ನೇಮಕ.!

ಮಂದಾರ ನ್ಯೂಸ್, ರಾಣೆಬೆನ್ನೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಬರೋಬ್ಬರಿ ರಾಜ್ಯದ ಇನ್ನೂ 211 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುವ ಮೂಲಕ ಪೊಲೀಸ ಇಲಾಖೆಗೆ ಚುರುಕು ಮುಟ್ಟಿಸಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಪ್ರವೀಣ್ ಕುಮಾರ್ ವಿ ಇವರನ್ನು ರಾಣೆಬೆನ್ನೂರು ಗ್ರಾಮಾಂತರ ಪೋಲಿಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು ಇವರಿಂದ ತೆರವಾದ ಜಾಗಕ್ಕೆ ಭಟ್ಕಳದಲ್ಲಿ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಮಹಾಬಲೇಶ್ವರ್ ಎಸ್ ನಾಯಕ್ ಇವರನ್ನು ನೇಮಕ್ಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯಾಗಿ ಪ್ರವೀಣ್ ಕುಮಾರ್ ವಿ ಇವರ ಅವಧಿಯಲ್ಲಿ ತಮ್ಮ ಪೊಲೀಸ್ ಠಾಣಾ ಸರಹದ್ದಿನಲ್ಲಿ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಿದ್ದರು. ಇವರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯದಂತಹ ಸಂದರ್ಭದಲ್ಲಿ ಜನಸ್ನೇಹಿ ಪೊಲೀಸ್ ಠಾಣೆಯನ್ನಾಗಿ ಮಾಡುವ ಮೂಲಕ ಅಕ್ರಮ ಚಟುವಟಿಕೆಗಳನ್ನ ಬ್ರೇಕ್ ಹಾಕಿ ಅದೆಷ್ಟೋ ಕುಟುಂಬಗಳು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದರು. ಇದೀಗ ಇವರನ್ನು ರಾಣೇಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ,ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುತ್ತಾರೆ? ಸಾಗರದಲ್ಲಿ ಕೈಗೊಂಡಂತ ನಿರ್ಧಾರಗಳನ್ನು ರಾಣೇಬೆನ್ನೂರು, ಗ್ರಾಮಾಂತರ ಪೊಲೀಸ್ ಠಾಣ ಸರಹದ್ದಿನಲ್ಲಿ ಕೈಗೊಳ್ಳುತ್ತಾರಾ ಕಾದು ನೋಡಬೇಕಾಗಿದೆ.


Post a Comment

0 Comments