ಪೋಲಿಸ್ ಇಲಾಖೆಗೆ ಮೇಜರ್ ಸರ್ಜರಿ. ರಾಜ್ಯದ 211 ಪೋಲಿಸ್ ಇನ್ ಸ್ಪೆಕ್ಟರ್ ವರ್ಗಾವಣೆ, ಸಾಗರ ಗ್ರಾಮಾಂತರ ಠಾಣಾಧಿಕಾರಿ ಪ್ರವೀಣ್ ಕುಮಾರ್. ವಿ ವರ್ಗಾವಣೆ.!!

ಮಂದಾರ ನ್ಯೂಸ್, ಸಾಗರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಬರೋಬ್ಬರಿ ರಾಜ್ಯದ ಇನ್ನೂ 211 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುವ ಮೂಲಕ ಪೊಲೀಸ ಇಲಾಖೆಗೆ ಚುರುಕು ಮುಟ್ಟಿಸಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಪ್ರವೀಣ್ ಕುಮಾರ್ ವಿ ಇವರನ್ನು ರಾಣೆಬೆನ್ನೂರು ಗ್ರಾಮಾಂತರ ಪೋಲಿಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು ಇವರಿಂದ ತೆರವಾದ ಜಾಗಕ್ಕೆ ಭಟ್ಕಳದಲ್ಲಿ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಮಹಾಬಲೇಶ್ವರ್ ಎಸ್ ನಾಯಕ್ ಇವರನ್ನು ನೇಮಕ್ಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


Post a Comment

0 Comments