ಮಂದಾರ ನ್ಯೂಸ್, ಹರಿಹರ: ಹರಿಹರ ತಾಲೂಕು ರಾಜನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.
ರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶ್ರೀಮತಿ ಶಕುಂತಲಾ ಯಲ್ಲಪ್ಪ ಹಾಗೂ ಉಪಾಧ್ಯಕ್ಷರಾಗಿ ಪರಶುರಾಮ್ ನಶ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷೆ ಶಂಕುತಲಮ್ಮ ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಶ್ರಮವಹಿಸುತ್ತೇನೆ, ನನ್ನನ್ನು ಪಂಚಾಯತಿಯ ಅಧ್ಯಕ್ಷೆಯಾಗಿ ಆಯ್ಕೆ ಮಾಡಿದ ಎಲ್ಲಾ ಚುನಾಯಿತ ಸದಸ್ಯರಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯ ಚುನಾವಣಾಧಿಕಾರಿಯಾಗಿ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರಾದ ಗಿರೀಶ್.ಬಿ.ಕೆ ಇವರು ಚುನಾವಣೆ ಪ್ರಕ್ರಿಯೆಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ರಾಜನಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬೀರೇಶ ಟಿ.ಎ, ಕಾರ್ಯದರ್ಶಿ ಚಮನ್ ಸಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದರು.
ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು ಊರಿನ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
0 Comments