ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕೂಡಲೇ ಅನುದಾನ ಬಿಡುಗಡೆಗೊಳಿಸಿ: ಡಿಎಸ್ಎಸ್.

ಮಂದಾರ ನ್ಯೂಸ್ ,ಹರಿಹರ: ಹರಿಹರ ನಗರದ ಹೃದಯ ಭಾಗದ ಹರಪನಹಳ್ಳಿ ಸರ್ಕಲ್ ಹಿಂಭಾಗ ಹಳೆ ಕೋರ್ಟ್ ಬಳಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಗರಸಭೆಯು 100*80 ಜಾಗವನ್ನು ಈಗಾಗಲೇ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದು ಸರ್ಕಾರವು ಭವನ ನಿರ್ಮಾಣಕ್ಕಾಗಿ ಎರಡು ಕೋಟಿ ಅನುದಾನವನ್ನ ಘೋಷಣೆ ಮಾಡಿರುತ್ತದೆ.

ಆದರೆ ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿ ಇನ್ನು ಪ್ರಾರಂಭವಾಗಿಲ್ಲ ಕೂಡಲೇ ಡಾಕ್ಟರ್ ಬಿಆರ್ ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಕೂಡಲೇ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಹರಿಹರ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಕಾರ್ಯದರ್ಶಿ ವೆಂಕಟೇಶ್ ಇವರಿಗೆ ಇಂದು ಲಿಖಿತ ರೂಪದಲ್ಲಿ ಮನವಿಯನ್ನು ಸಲ್ಲಿಸಿದರು.
ಈಗಾಗಲೇ ರಾಜ್ಯ ಸರ್ಕಾರ ಎರಡು ಕೋಟಿ ರೂಪಾಯಿ ಅನುದಾನವನ್ನು ನೀಡುವ ಭರವಸೆ ನೀಡಿದೆ ಇದರ ಜೊತೆಗೆ ಹೆಚ್ಚುರಿಯಾಗಿ ಇನ್ನು ಇನ್ನು ಮೂರು ಕೋಟಿ ಅನುದಾನವನ್ನು ನಡುವ ಮೂಲಕ ಕೂಡಲೇ ಐದು ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದರು.
ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜಸೇವಕರಾದ ನಂದಿಗಾವಿ ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕ ಅಧ್ಯಕ್ಷ ಮಂಜುನಾಥ್ ಎಂ, ಜಿಲ್ಲಾ ಕಾರ್ಯದರ್ಶಿ ಸಂತೋಷ್ ನೋಟದವರ್, ತಾಲೂಕು ಸಂಚಾಲಕರಾದ ಮಂಜುನಾಥ್ ಜಿಎಂ, ಭಾಸ್ಕರ್ ಬಿ ಎಂ ,ವಿಶ್ವನಾಥ್ ಕೆ ಬೇವಿನಹಳ್ಳಿ, ಮಂಜುನಾಥ್ ದೊಡ್ಮನಿ, ಗೋವರ್ಧನ್, ರಮೇಶ್ ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments