ಮಂದಾರ ನ್ಯೂಸ್, ಹರಿಹರ: ಕಳೆದ 2018 ರಿಂದ ಹರಿಹರ ಸಾರ್ವಜನಿಕರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ಹಾಗೂ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹನುಮನಾಯ್ಕ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ತಾಲೂಕು ಸಮಿತಿ ಹರಿಹರ ಇವರ ವತಿಯಿಂದ ನಾಳೆ ದಿನ ದಿನಾಂಕ (೧೦-೮-೨೦೨೩) ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ಆಸ್ಪತ್ರೆಯ ಮುಂಭಾಗದಲ್ಲಿ ಧರಣಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಆಸ್ಪತ್ರೆಯ ಮುಖ್ಯ ವೈದ್ಯಧಿಕಾರಿಯ ಆಡಳಿತ ವೈದ್ಯರಿಗೆ ಸಂಬಂಧಿಸಿದಂತೆ ಈ ಹಿಂದಿನಿಂದಲೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹರಿಹರ ತಾಲೂಕ್ ಘಟಕದ ವತಿಯವರು ಹೋರಾಟವನ್ನು ಮಾಡಿಕೊಂಡು ಬಂದಿದ್ದರು. ಆದರೆ ಇವರ ಹೋರಾಟಕ್ಕೆ ಸಂಬಂಧಿಸಿದ ಇಲಾಖೆಯ ಮೇಲಾಧಿಕಾರಿಗಳು ಸ್ಪಂದಿಸದೆ ಇದ್ದ ಕಾರಣ ಅನಿವಾರ್ಯವಾಗಿ ನಾಳೆ ದಿನ ಸಂಘಟನೆಯ ಕಾರ್ಯಕರ್ತರು ಧರಣಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ.
ವರದಿ :ತಿಪ್ಪೇಶ್ ಎಲ್.
0 Comments