ಮಂದಾರ ನ್ಯೂಸ್, ದಾವಣಗೆರೆ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗುತ್ತಿದೆ. ಕಳೆದ ಒಂದು ತಿಂಗಳಿಂದ ಪೊಲೀಸ್ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಇದೀಗ ಐಪಿಎಸ್ ಅಧಿಕಾರಿಗಳ ವರ್ಗಾವಣೆಯ ಸರದಿ.
ದಾವಣಗೆರೆ ಜಿಲ್ಲೆಯ ಖಡಕ್ ಐಪಿಎಸ್ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಕೆ ಇವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ಡಾ. ಅರುಣ್ ಕುಮಾರ್ ಕೆ ಇವರು ಕಲ್ಬುರ್ಗಿ ಜಿಲ್ಲೆಯ ಪೊಲೀಸ್ ತರಬೇತಿ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದೆ. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬರುವ ಮುನ್ನ ಬುರ್ಜಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಚುನಾವಣೆಯ ಕಾರಣದಿಂದ ಅವರನ್ನು ಏಪ್ರಿಲ್ ತಿಂಗಳಲ್ಲಿ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು.
ಡಾ. ಅರುಣ್ ಕುಮಾರ್ ಕೆ ಇವರು ಕೇವಲ ಐದು ತಿಂಗಳಲ್ಲಿ ದಾವಣಗೇರಿ ಜಿಲ್ಲೆಯ ಅಕ್ರಮ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಸಿಂಹ ಸ್ವಪ್ನ ವಾಗಿದ್ದರು. ಇವರ ಚುನಾವಣೆಯ ನಂತರ ಇವರ ವರ್ಗಾವಣೆಗಾಗಿ ತೆರೆಮರೆಯಲ್ಲಿ ಕಾರ್ಯತಂತ್ರ ನಡೆಯುತ್ತಿದ್ದವು. ಕಳೆದ ಒಂದು ವಾರದ ಹಿಂದೆ ಹೊನ್ನಾಳಿ ಶಾಸಕರ ಬೇಡಿಕೆಯು ಇದಾಗಿತ್ತು. ಕೊನೆಗೂ ಶಾಸಕರ ಬೇಡಿಕೆ ರಾಜ್ಯ ಸರ್ಕಾರ ಈಡೇರಿಸಿದೆ.
ಡಾ. ಅರುಣ್ ಕುಮಾರ್ ಕೆ ಇವರ ವರ್ಗಾವಣೆ ಕೆಲವರಿಗೆ ತುಂಬ ಸಂತೋಷವಾದಂತೆ ಕಾಣುತ್ತಿದೆ. ಸದ್ಯ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಯಾರು ಬರುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.
0 Comments