ಮಂದಾರ ನ್ಯೂಸ್ ಹರಿಹರ: ಶ್ರೀ ವಿನಾಯಕ ಎಜುಕೇಶನ್ ಟ್ರಸ್ಟ್ ಹನಗವಾಡಿಯ ಡಾಲ್ಫಿನ್ ಪಬ್ಲಿಕ್ ಸ್ಕೂಲ್ ನಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಮಣ್ಣಿನ ಮುದ್ದೆಯಂತಿರುವ ಮಕ್ಕಳನ್ನು ಶಿಕ್ಷಣವೆಂಬ ಸಂಸ್ಕಾರವನ್ನು ನೀಡಿ ಸುಂದರ ಮೂರ್ತಿಯನ್ನಾಗಿ ರೂಪಿಸುವ ಶಿಕ್ಷಕರಿಗಾಗಿ ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವಂತೆ ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದರು.
ಅವರ ಜನ್ಮ ದಿನಾಚರಣೆಯ ಅಂಗವಾಗಿಯೇ ಶಿಕ್ಷಕರ ದಿನಾಚರಣೆಯನ್ನು ಸೆಪ್ಟಂಬರ್ 5 ರಂದು ದೇಶಾದ್ಯಂತ ಆಚರಣೆ ಮಾಡಲಾಗುತ್ತಿದೆ ಎಂದು ಡಾಲ್ಫಿನ್ ಪಬ್ಲಿಕ್ ಸ್ಕೂಲ್ ನ ಮುಖ್ಯ ಶಿಕ್ಷಕರು ಶಿಕ್ಷಕರ ದಿನಾಚರಣೆಯ ಆಚರಣೆ ಮತ್ತು ಮಹತ್ವವನ್ನ ಮಕ್ಕಳಿಗೆ ತಿಳಿಸಿದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ಪುಸ್ತಕ ಹಾಗೂ ಪೆನ್ನಿನ ಆಕೃತಿಯ ಕೇಕನ್ನು ಕತ್ತರಿಸುವ ಮೂಲಕ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂದರೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಡಾಲ್ಫಿನ್ ಪಬ್ಲಿಕ್ ಸ್ಕೂಲ್ ನ ಎಲ್ಲಾ ಸಹಾಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.
0 Comments